By : Oneindia Kannada Video Team
Published : September 06, 2017, 01:01

ಗೌರಿ ಲಂಕೇಶ್ ಹತ್ಯೆ: ಆಕ್ರೋಶ ವ್ಯಕ್ತಪಡಿಸಿದ ಹಿರಿಯ ಪತ್ರಕರ್ತರು | ಟೌನ್ ಹಾಲ್ ಎದುರು ಪ್ರತಿಭಟನೆ

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ತಮ್ಮ ಮನೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಸೆ.5 ರಂದು ಬಲಿಯಾದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯನ್ನು ಭಾರತದಾದ್ಯಂತ ಹಿರಿಯ ಪತ್ರಕರ್ತರು ಖಂಡಿಸಿದ್ದಾರೆ. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ. ಗೌರಿ ಲಂಕೇಶ್(55) ಹತ್ಯೆ ಪ್ರಕರಣವನ್ನು ಆದಷ್ಟು ತ್ವರಿತವಾಗಿ ಇತ್ಯರ್ಥಗೊಳಿಸುವುದಕ್ಕೆ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದರು. ಗೌರಿಯವರ ಹತ್ಯೆಯನ್ನ ಖಂಡಿಸಿ ಇಂದು ಬೆಂಗಳೂರಿನ ಟೌನ್ ಹಾಲ್ ಎದುರು ಪ್ರತಿಭಟನೆ ನಡೆಯುತ್ತಿದೆ . ಈ ವೀಡಿಯೋ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!