By: Oneindia Kannada Video Team
Published : January 26, 2018, 04:56

ಅಲ್ಪಸಂಖ್ಯಾತರ ವಿರುದ್ಧದ ಕೇಸ್ ವಾಪಸ್, ಹೊಸ ವಿವಾದ

Subscribe to Oneindia Kannada

ಬೆಂಗಳೂರು, ಜನವರಿ 26 : ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ನಿರ್ಧಾರವೊಂದು ವಿವಾದಕ್ಕೆ ಕಾರಣವಾಗಿದೆ. ಕೋಮು ಗಲಭೆಯಲ್ಲಿ ಭಾಗಿಯಾದ ಅಲ್ಪ ಸಂಖ್ಯಾತರಿಗೆ ಕ್ಲೀನ್ ಚಿಟ್ ನೀಡಲು ಸರ್ಕಾರ ತೀರ್ಮಾನಿಸಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಕೋಮುಗಲಭೆಯಲ್ಲಿ ಭಾಗಿಯಾದ ಅಲ್ಪಸಂಖ್ಯಾತರಿಗೆ ಕ್ಲೀನ್ ಚಿಟ್‌ ನೀಡಲು ಸರ್ಕಾರ ನಿರ್ಧರಿಸಿದ್ದು, ದಾಖಲಾಗಿರುವ ಪ್ರಕರಣಗಳನ್ನು ವಾಪಸ್ ಪಡೆಯಲು ಮುಂದಾಗಿದೆ. ಅಭಿಯೋಜನೆಯಿಂದ ಕೇಸುಗಳನ್ನು ವಾಪಸ್ ಪಡೆಯಲು ಕೋರಿ ಪತ್ರ ಬರೆಯಲಾಗಿದೆ

ಗೃಹ ಸಚಿವರ ಸಮರ್ಥನೆ : ಸರ್ಕಾರದ ನಿರ್ಧಾರವನ್ನು ಗೃಹ ಸಚಿವ ರಾಮಲಿಂಗಾ ರೆಡ್ಡಿ ಸಮರ್ಥಿಸಿಕೊಂಡಿದ್ದಾರೆ. 'ಮಹದಾಯಿ, ಕಾವೇರಿ ಹೋರಾಟದಲ್ಲಿ ಭಾಗಿಯಾಗಿದ್ದ ರೈತರ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆದಿದ್ದೇವೆ' ಎಂದು ಹೇಳಿದರು. 'ಟಿಪ್ಪು ಜಯಂತಿ ವೇಳೆ ಹಲವು ಕಡೆ ಪರ-ವಿರೋಧ ಪ್ರತಿಭಟನೆಗಳು ನಡೆದಿವೆ. ಆಸ್ತಿ ಹಾನಿ, ಕೊಲೆ ಯತ್ನ ಪ್ರಕರಣಗಳನ್ನು ನಾವು ವಾಪಸ್ ಪಡೆಯುತ್ತಿಲ್ಲ' ಎಂದು ಗೃಹ ಸಚಿವರು ಸ್ಪಷ್ಟನೆ ನೀಡಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!