By: Oneindia Kannada Video Team
Published : December 09, 2017, 12:07

ಗುಜರಾತ್ ಫಲಿತಾಂಶದ ನಂತರ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ

Subscribe to Oneindia Kannada

ಇಡೀ ದೇಶದ ಗಮನವನ್ನು ತನ್ನತ್ತ ಸೆಳೆದಿರುವ ಗುಜರಾತ್ ಅಸೆಂಬ್ಲಿಗೆ ಮೊದಲ ಹಂತದ ಚುನಾವಣೆ ಶನಿವಾರ (ಡಿ 9) ಈಗ ಚಾಲ್ತಿಯಲ್ಲಿದೆ, ಎರಡನೇ ಹಂತದ ಚುನಾವಣೆ ಗುರುವಾರ (ಡಿ 14) ನಡೆಯಲಿದೆ. ಫಲಿತಾಂಶ ಸೋಮವಾರ (ಡಿ 18) ಹೊರಬೀಳಲಿದೆ. ಗುಜರಾತ್ ಚುನಾವಣಾ ಫಲಿತಾಂಶ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ಹೇಗೆ ನಿರ್ಣಾಯಕವೋ, ಹಾಗೇ ಇನ್ನೇನು ಕೆಲವೇ ತಿಂಗಳಲ್ಲಿ ನಡೆಯಲಿರುವ ಕರ್ನಾಟಕದಲ್ಲೂ ಈ ಫಲಿತಾಂಶ ಭಾರೀ ರಾಜಕೀಯ ಧೃವೀಕರಣಕ್ಕೆ ಮುನ್ನುಡಿ ಬರೆಯಲಿದೆ.ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ, ಕಾಂಗ್ರೆಸ್ಸಿನ ಹಲವು ಮುಖಂಡರು ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಕೂಡಾ, ಗುಜರಾತ್ ಚುನಾವಣಾ ಫಲಿತಾಂಶದ ನಂತರ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುವಂತಹ ಬೆಳವಣಿಗೆಗಳು ನಡೆಯಲಿದೆ ಎಂದು ಸೂಚ್ಯವಾಗಿ ಈಗಾಗಲೇ ಹೇಳಿದ್ದಾರೆ.ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ನಾವೇ ಜಯಗಳಿಸುವುದು ಎಂದು ಹೇಳುತ್ತಿದ್ದರೂ, ಅಧಿಕಾರ ರಚನೆಗೆ ಜೆಡಿಎಸ್ ನಿರ್ಣಾಯಕ ಪಾತ್ರ ವಹಿಸುವ ಸಾಧ್ಯತೆಯಿಲ್ಲದಿಲ್ಲ ಎನ್ನುವ ರಾಜಕೀಯ ಲೆಕ್ಕಾಚಾರ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಗೊತ್ತಿಲ್ಲದ ವಿಚಾರವೇನೂ ಅಲ್ಲ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!