By : Oneindia Kannada Video Team
Published : December 08, 2017, 01:22

ಗುಜರಾತ್ ವಿಧಾನಸಭಾ ಚುನಾವಣೆ 2017 : ಯು ಟಿ ಖಾದರ್ ಚುನಾವಣೆ ಪ್ರಚಾರ ಜೋರು

ರಾಜ್ಯ ಸರ್ಕಾರದ ಆಹಾರ ಮತ್ತು ನಾಗರೀಕ ಸಚಿವ ಯು.ಟಿ.ಖಾದರ್ ಅವರು ಗುಜರಾತ್ ನ ಚುನಾವಣಾ ಪ್ರಚಾರದಲ್ಲಿ ಸಕ್ರಿಯರಾಗಿದ್ದಾರೆ, ಹೈಕಮಾಂಡ್ ಆದೇಶದಂತೆ ಗುಜರಾತ್ ನಲ್ಲಿ ಕಾಂಗ್ರೆಸ್ ಪರ ಬೂತ್ ಮಟ್ಟದ ಪ್ರಚಾರ ಕಾರ್ಯದಲ್ಲಿ ಹುಮ್ಮಸ್ಸಿನಿಂದ ತೊಡಗಿಕೊಂಡಿದ್ದಾರೆ ಯು.ಟಿ.ಖಾದರ್.ಕಳೆದ ಒಂದು ವಾರದಿಂದಲೂ ಗುಜರಾತ್ ನಲ್ಲಿ ಕಾಂಗ್ರೆಸ್ ಪರ ಪ್ರಚಾರದಲ್ಲಿ ನಿರತರಾಗಿರುವ ಕರ್ನಾಟಕ ರಾಜ್ಯ ಸಚಿವ ಯು.ಟಿ.ಖಾದರ್ ಅವರು ದೊಡ್ಡ ರ್ಯಾಲಿಗಳಿಗೆ ಬದಲಾಗಿ ಬೂತ್ ಮಟ್ಟದ, ತಾಲ್ಲೂಕು ಮಟ್ಟದ ಸಭೆಗಳು, ಪ್ರಚಾರ ಕಾರ್ಯಕ್ರಮಗಳಲ್ಲಿ ನಿರತರಾಗಿದ್ದಾರೆ.ಕಾಂಗ್ರೆಸ್ ಹೈಕಮಾಂಡ್ ಆಜ್ಞೆ ಮೇರೆಗೆ ಗುಜರಾತ್ ಗೆ ತೆರಳಿರುವ ಅವರು ತಮಗೆ ವಹಿಸಿರುವ ಕಾರ್ಯವನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಿದ್ದಾರೆ.ವಿಶೇಷವಾಗಿ ಮುಸ್ಲೀಮರು ಹೆಚ್ಚಿಗಿರುವ ಪ್ರದೇಶದಲ್ಲಿ ಪ್ರಚಾರ ಮಾಡುತ್ತಿರುವ ಯು.ಟಿ.ಖಾದರ್ ಅವರು, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಅನುಷ್ಠಾನಕ್ಕೆ ತಂದಿರುವ ಇಂದಿರಾ ಕ್ಯಾಂಟೀನ್, ಶಾದಿಭಾಗ್ಯ ಮುಂತಾದ ಯೋಜನೆಗಳನ್ನು ಅಲ್ಲಿನ ಸ್ಥಳೀಯರ ಗಮನಕ್ಕೆ ತಂದು ಕಾಂಗ್ರೆಸ್‌ಗೆ ಮತ ನೀಡುವಂತೆ ಕೋರುತ್ತಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!