By : Oneindia Kannada Video Team
Published : December 18, 2017, 12:36

ಗುಜರಾತ್ ಚುನಾವಣೆ ಫಲಿತಾಂಶ 2017 : ಕರ್ನಾಟಕ ರಾಜಕೀಯ ನಾಯಕರ ಪ್ರತಿಕ್ರಿಯೆ

ಗುಜರಾತ್ ಮತ್ತು ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಳ್ಳುತ್ತಿದೆ. ಕರ್ನಾಟಕದ ಮೇಲೆ ಈ ಚುನಾವಣೆ ಫಲಿತಾಂಶ ಪ್ರಭಾವ ಬೀರಲಿದೆ ಎಂಬು ವಿಶ್ಲೇಷಿಸಲಾಗುತ್ತಿದೆ.ಗುಜರಾತ್‌ನ 182, ಹಿಮಾಚಲ ಪ್ರದೇಶದ 68 ಸ್ಥಾನಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಸೋಮವಾರ ನಡೆಯುತ್ತಿದೆ. ಕರ್ನಾಟಕ ವಿವಿಧ ಪಕ್ಷಗಳ ನಾಯಕರು ಎರಡೂ ರಾಜ್ಯಗಳ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.ಎರಡೂ ರಾಜ್ಯಗಳ ಚುನಾವಣೆ ಫಲಿತಾಂಶದದ ಬಗ್ಗೆ ಪ್ರತಿಕ್ರಿಯೆ ನೀಡಿದ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು, 'ಗುಜರಾತ್, ಹಿಮಾಚಲ ಪ್ರದೇಶದಲ್ಲಿ ಗೆಲುವು ಸಾಧಿಸಲಿದ್ದೇವೆ ಎಂಬ ನಿರೀಕ್ಷೆ ಇತ್ತು. ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವನ್ನು ಜನರು ಮೆಚ್ಚಿದ್ದಾರೆ ಎಂಬುದಕ್ಕೆ ಇದೇ ಸಾಕ್ಷಿ. ಇದು ಬದಲಾವಣೆಯ ಕಾಲ. ಕರ್ನಾಟಕದಲ್ಲಿಯೂ ಬಿಜೆಪಿ 150 ಸ್ಥಾನಗಳಲ್ಲಿ ಜಯಗಳಿಸಲಿದೆ. ನಾಳೆಯಿಂದ ಬಿಜೆಪಿ ಕಡೆ ಕಾಂಗ್ರೆಸ್, ಜೆಡಿಎಸ್‌ನ ರಾಜ್ಯ, ತಾಲೂಕು, ಜಿಲ್ಲಾ ಮಟ್ಟದ ನಾಯಕರು ಆಗಮಿಸಲಿದ್ದಾರೆ' ಎಂದು ಹೇಳಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!