By : Oneindia Kannada Video Team
Published : November 27, 2017, 04:04

ದೇವೇಗೌಡ್ರ ಮಾಸ್ಟರ್ ಪ್ಲಾನ್ : ಜೆಡಿಎಸ್ ಪ್ರಧಾನ ಕಾರ್ಯದರ್ಶಿಯಾಗಿ ಪ್ರಜ್ವಲ್ ರೇವಣ್ಣ

ಜೆಡಿಎಸ್ ನಲ್ಲಿ ಪ್ರಜ್ವಲ್ ರೇವಣ್ಣಗೆ ಹೊಸ ಹುದ್ದೆ, ದೇವೇಗೌಡ್ರ ಮಾಸ್ಟರ್ ಪ್ಲಾನ್. 2018ರ ವಿಧಾಸಭಾ ಚುನಾವಣೆಗೆ ಸ್ಪರ್ಧಿಸಲು ಹಾತೊರೆಯುತ್ತಿದ್ದ ಎಚ್ ಡಿ ರೇವಣ್ಣ ಪುತ್ರ ಯುವ ನಾಯಕ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಜೆಡಿಎಸ್ ವರಿಷ್ಠ ಎಚ್. ಡಿ ದೇವೇಗೌಡ ಅವರು ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ಸೋಮವಾರ ಆದೇಶ ಹೊರಡಿಸಿದರು.ಈ ಮೂಲಕ ಚುನಾವಣೆ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಗೌಡರ ಕುಟುಂಬದಲ್ಲಿ ಎದ್ದಿದ್ದ ಅಸಮಾಧಾನದ ಹೊಗೆಯನ್ನು ಸರಿಪಡಿಸಲು ದೇವೇಗೌಡ್ರು ಈ ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ ಎನ್ನಲಾಗಿದೆ.ಪ್ರಜ್ವಲ್ ರೇವಣ್ಣ ಮುಂದಿನ ಚುನಾವಣೆಯಲ್ಲಿ ಹುಣಸೂರು ಕ್ಷೇತ್ರದಿಂದ ಸ್ಪರ್ಧಿಸಲು ಎಲ್ಲಾ ಸಿದ್ಧತೆಗಳನ್ನು ನಡೆಸಿದ್ದರು. ಆದರೆ, ಇದಕ್ಕೆ ದೊಡ್ಡ ಗೌಡ್ರು ಕಲ್ಲು ಹಾಕಿದ್ದರು.ಇದರಿಂದ ಅಸಮಾಧಾನಗೊಂಡಿದ್ದ ಪ್ರಜ್ವಲ್, ಜೆಡಿಎಸ್ ನಲ್ಲಿ ಸೂಟ್ ಕೇಸ್ ಕೊಟ್ಟವರಿಗೆ ಮಣೆ ಹಾಕಲಾಗುತ್ತಿದೆ ಎಂದು ಚಿಕ್ಕಪ್ಪ ಕುಮಾರಸ್ವಾಮಿ ಹಾಗೂ ತಾತ ದೇವೇಗೌಡರ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದರು. ಇದೀಗ ಪ್ರಜ್ವಲ್ ಗೆ ಮೊದಲ ಬಾರಿಗೆ ಪಕ್ಷದ ಪದಾಧಿಕಾರಿಯಲ್ಲಿ ಸ್ಥಾನ ನೀಡಲಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!