By : Oneindia Kannada Video Team
Published : December 28, 2017, 03:01

ಕರ್ನಾಟಕ ಚುನಾವಣೆ 2018ಕ್ಕೆ ದೇವೇಗೌಡ ಕುಮಾರಸ್ವಾಮಿ ಮಾಸ್ಟರ್ ಪ್ಲಾನ್

2018ರ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ತೀವ್ರ ಸ್ಪರ್ಧೆಯೊಡ್ಡಲು ಜೆಡಿಎಸ್‌ ನಿರ್ಧರಿಸಿದೆ. ಇದಕ್ಕಾಗಿ ಪಕ್ಷ ರಣತಂತ್ರವನ್ನು ರೂಪಿಸುತ್ತಿದೆ.ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಡಾ.ಯತೀಂದ್ರ ಸಿದ್ದರಾಮಯ್ಯ ಅವರು ವರುಣಾದಿಂದ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ. ಇವೆರಡು ಕ್ಷೇತ್ರವನ್ನು ಕೇಂದ್ರವಾಗಿಟ್ಟುಕೊಂಡು ಜೆಡಿಎಸ್ ತಂತ್ರ ಹಣೆಯಲಿದೆ.ಸಂಕ್ರಾಂತಿ ಬಳಿಕ ರಾಜ್ಯದ ರಾಜಕೀಯ ವಿದ್ಯಮಾನಗಳು ಗರಿಗೆದರಲಿವೆ. ಸತತ ಮೂರು ತಿಂಗಳ ಕಾಲ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಒಂದು ವಾರ ಮೈಸೂರಿನಲ್ಲಿಯೇ ವಾಸ್ತವ್ಯ ಹೂಡಲಿದ್ದು, ಪಕ್ಷ ಗೆಲುವಿಗೆ ಬೇಕಾದ ತಂತ್ರ, ಅಭ್ಯರ್ಥಿಗಳ ಆಯ್ಕೆ, ಪ್ರಚಾರ ಮುಂತಾದ ಯೋಜನೆಗಳನ್ನು ರೂಪಿಸಲಿದ್ದಾರೆ.ಜೆಡಿಎಸ್ ಮೈಸೂರು ವ್ಯಾಪ್ತಿಗೆ ಸೇರುವ ಚಾಮುಂಡೇಶ್ವರಿ, ವರುಣಾ, ಕೆ.ಆರ್‌.ನಗರ, ಹುಣಸೂರು, ಪಿರಿಯಾಪಟ್ಟಣ, ಟಿ.ನರಸೀಪುರ, ಎಚ್‌.ಡಿ.ಕೋಟೆ, ನಂಜನಗೂಡು, ಚಾಮರಾಜ, ನರಸಿಂಹರಾಜ, ಕೃಷ್ಣರಾಜ ಕ್ಷೇತ್ರಗಳ ಬಗ್ಗೆ ಹೆಚ್ಚಿನ ಗಮನ ನೀಡಲು ಮೂರು ದಿನ ಕ್ಷೇತ್ರವಾರು ನಿರಂತರ ಸಭೆಯನ್ನು ಆಯೋಜನೆ ಮಾಡಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!