By: Oneindia Kannada Video Team
Published : November 07, 2017, 02:41

ಚಾಮುಂಡಿ ಸನ್ನಿಧಿಯಲ್ಲಿ ಎಚ್ ಡಿ ಕುಮಾರಸ್ವಾಮಿ ಜೆಡಿಎಸ್ ವಿಕಾಸ ಯಾತ್ರೆಗೆ ಚಾಲನೆ

Subscribe to Oneindia Kannada

ಚಾಮುಂಡಿ ಸನ್ನಿಧಿಯಲ್ಲಿ 'ಕುಮಾರಪರ್ವ'ಕ್ಕೆ ಮುನ್ನುಡಿ ಬರೆದ ಜೆಡಿಎಸ್. ಮುಂಬರುವ ವಿಧಾನಸಭಾ ಚುನಾವಣೆಗೆ ಇಂದಿನಿಂದಲೇ ಭರ್ಜರಿ ಪ್ರಚಾರಕ್ಕೆ ಚಾಲನೆ ನೀಡಲು ಜೆಡಿಎಸ್ ಮುಂದಾಗಿದೆ. ಜೆಡಿಎಸ್ ಪರ ಬಿರುಸಿನ ಪ್ರಚಾರ ನಡೆಸಲು ವಿಶೇಷವಾಗಿ ವಿನ್ಯಾಸಗೊಳಿಸಿರುವ 'ಕರ್ನಾಟಕ ವಿಕಾಸ ವಾಹಿನಿ' ವಾಹನದ ಸಂಚಾರಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಚಾಮುಂಡಿ ಬೆಟ್ಟದಲ್ಲಿ ಅಧಿಕೃತ ಚಾಲನೆ ನೀಡಿದರು.ಜೆಡಿಎಸ್ ವಿಕಾಸ ವಾಹಿನಿ ವಾಹನವನ್ನೇರಿ ಪತ್ನಿ ಅನಿತಾ ಕುಮಾರಸ್ವಾಮಿಯವರ ಜೊತೆ ಚಾಮುಂಡೇಶ್ವರಿ ದೇಗುಲವನ್ನು ಒಂದು ಸುತ್ತು ಹಾಕಿದ ಕುಮಾರಸ್ವಾಮಿಯವರು ಮಾಧ್ಯಮದೊಂದಿಗೆ ಮಾತನಾಡಿದರು. "ಇತ್ತೀಚಿನ ಬಹುತೇಕ ಸಮೀಕ್ಷೆಗಳು ಜೆಡಿಎಸ್ 65 ಸ್ಥಾನ ಗಳಿಸಲಿದೆ ಎಂದು ಹೇಳಿವೆ, ಆದರೆ ಇದನ್ನು ಮೀರಿ 113ರ ಗಡಿ ತಲುಪುವುದೇ ನಮ್ಮ ಏಕೈಕ ಗುರಿಯಾಗಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ 113ರ ಗಡಿ ತಲುಪಿ ಅಧಿಕಾರಕ್ಕೆ ಬರುವುದು ಶತಃಸಿದ್ಧ" ಎಂದು ವಿಶ್ವಾಸ ವ್ಯಕ್ತಪಡಿಸಿದರು.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!