By: Oneindia Kannada Video Team
Published : November 20, 2017, 04:26

ಸಿದ್ದರಾಮಯ್ಯನವರನ್ನ ತರಾಟೆಗೆ ತೆಗೆದುಕೊಂಡ ಎಚ್ ಡಿ ಕುಮಾರಸ್ವಾಮಿ

Subscribe to Oneindia Kannada

'ಹಣಬಲದಿಂದ ಸಿದ್ದರಾಮಯ್ಯ ಗೆಲುವು ಪಡೆಯುವುದು ಸಾಧ್ಯವಿಲ್ಲ' 'ಹಣ ಬಲದಿಂದ ಗೆಲುವು ಪಡೆಯಬಹುದು ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತಂತ್ರ ಮುಂದಿನ ಚುನಾವಣೆಯಲ್ಲಿ ನಡೆಯುವುದಿಲ್ಲ' ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.ಮೈಸೂರಿನ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ಭಾನುವಾರ 'ಕುಮಾರಪರ್ವ' ಸಮಾವೇಶ ನಡೆಯಿತು. ಸಮಾವೇಶ ಉದ್ದೇಶಿಸಿ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸೇರಿದಂತೆ ಹಲವು ನಾಯಕರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.ಸಮಾವೇಶದಲ್ಲಿ ಪಾಲ್ಗೊಂಡಿದ್ದ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರು, 'ತಮಿಳುನಾಡಿನಲ್ಲಿ ಅಂದು ಅಣ್ಣಾದೊರೈ ಕಾಂಗ್ರೆಸ್ ಪಕ್ಷ ತೆಗೆಯಲು ಮಾಡಿದ ಪ್ರತಿಜ್ಞೆಯಿಂದಾಗಿ ಇದುವರೆಗೂ ಅಲ್ಲಿ ಕಾಂಗ್ರೆಸ್ ಪಕ್ಷ ತಲೆ ಎತ್ತಲಾಗಿಲ್ಲ. ಅಂತಹ ಒಂದು ಪ್ರಾದೇಶಿಕ ಪಕ್ಷ ರಾಜ್ಯಕ್ಕೆ ಬೇಕು' ಎಂದರು.ಸಮಾವೇಶದಲ್ಲಿಯೇ 2018ರ ವಿಧಾನಸಭೆ ಚುನಾವಣೆಗೆ ಚಾಮರಾಜ ಕ್ಷೇತ್ರದ ಅಭ್ಯರ್ಥಿ ಪ್ರೊ.ಕೆ.ಎಸ್.ರಂಗಪ್ಪ ಎಂದು ಎಚ್.ವಿಶ್ವನಾಥ್ ಘೋಷಣೆ ಮಾಡಿದರು. ನಂತರ ಕುಮಾರಸ್ವಾಮಿ ಅವರು ಇದನ್ನು ಅನುಮೋದನೆ ಮಾಡಿದರು.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!