By : Oneindia Kannada Video Team
Published : November 28, 2017, 03:37

ಎಚ್ ಡಿ ಕುಮಾರಸ್ವಾಮಿ ದಲಿತರ ಬಗ್ಗೆ ಹೇಳಿದ್ದೇನು?

ಉಪ ಮುಖ್ಯಮಂತ್ರಿ ಪಟ್ಟದ ಬಗ್ಗೆ ಎಚ್ಡಿಕೆ ಹೇಳಿದ್ದೇನು? 'ಜೆಡಿಎಸ್ ಅಧಿಕಾರಕ್ಕೆ ಬಂದರೆ ದಲಿತ ಹಾಗೂ ಅಲ್ಪ ಸಂಖ್ಯಾತ ಸಮದಾಯಕ್ಕೆ ಸೇರಿದವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಲಾಗುತ್ತದೆ' ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಜೆಡಿಎಸ್ ಪರಿಶಿಷ್ಟ ಜಾತಿ/ಪಂಗಡ ಘಟಕ ಸೋಮವಾರ ಬೆಂಗಳೂರಿನ ಟೌನ್‌ ಹಾಲ್‌ನಲ್ಲಿ ಎಚ್.ಡಿ.ಕುಮಾರಸ್ವಾಮಿ ಜೊತೆ ಸಂವಾದ ಕಾರ್ಯಕ್ರಮ ಆಯೋಜಿಸಿತ್ತು. ಕಾರ್ಯಕ್ರಮದಲ್ಲಿ ದಲಿತ ಸಂಘಟನೆಯ ಮುಖಂಡರ ಜೊತೆ ಕುಮಾರಸ್ವಾಮಿ ಮಾತುಕತೆ ನಡೆಸಿದರು.ಕರ್ನಾಟಕದ ಸುಮಾರು 80 ದಲಿತ ಸಂಘಟನೆಗಳ ಪ್ರತಿನಿಧಿಗಳು ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. 'ನಾನು 15 ವರ್ಷಗಳನ್ನು ಕೇಳುತ್ತಿಲ್ಲ. 5 ವರ್ಷ ಅವಕಾಶ ನೀಡಿ ಸಾಕು ಬದಲಾವಣೆಯನ್ನು ತರುತ್ತೇನೆ' ಎಂದು ಕುಮಾರಸ್ವಾಮಿ ಮನವಿ ಮಾಡಿದರು.'ನಾನು ಆಕಸ್ಮಿಕವಾಗಿ ರಾಜಕೀಯಕ್ಕೆ ಬಂದವನು. ನೀವು ಬಹಳ ಪಕ್ಷಗಳು ರಾಜ್ಯದಲ್ಲಿ ಆಡಳಿತ ನಡೆಸಿದ್ದನ್ನು ನೋಡಿದ್ದೀರಿ. ಒಂದು ಬಾರಿ ಜೆಡಿಎಸ್ ಪಕ್ಷಕ್ಕೆ ಅವಕಾಶ ನೀಡಿ, 2018ರ ಚುನಾವಣೆಯಲ್ಲಿ ಪಕ್ಷವನ್ನು ಬೆಂಬಲಿಸಿ' ಎಂದು ಕುಮಾರಸ್ವಾಮಿ ಕರೆ ನೀಡಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!