By : Oneindia Kannada Video Team
Published : November 09, 2017, 11:52

ಶಿವಮೊಗ್ಗದಲ್ಲಿ ಕುಮಾರ ಪರ್ವ ವಿಕಾಸ ಯಾತ್ರೆಯ ಬಗ್ಗೆ ಎಚ್ ಡಿ ಕುಮಾರಸ್ವಾಮಿಯವರ ಮಾತು

'ನೀವು ನಮಗೆ ಬೆಂಬಲ ಕೊಡಿ ಸ್ವಂತ ಬಲದಿಂದ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದಲ್ಲಿ 24ಗಂಟೆಯಲ್ಲಿ ರೈತರ ಸಂಪೂರ್ಣ ಸಾಲವನ್ನು ಮನ್ನಾ ಮಾಡುತ್ತೇನೆ' ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದರು. 'ಕುಮಾರಪರ್ವ' ಯಾತ್ರೆ ಮೂಲಕ ರಾಜ್ಯ ಪ್ರವಾಸ ಮಾಡುತ್ತಿರುವ ಎಚ್.ಡಿ.ಕುಮಾರಸ್ವಾಮಿ ಶಿವಮೊಗ್ಗದ ಎನ್ಇಎಸ್ ಕಾಲೇಜಿನ ಆವರಣದಲ್ಲಿ ಹಮ್ಮಿಕೊಳ್ಳಲಾದ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಬುಧವಾರ ಸಂಜೆ ಮಾತನಾಡಿದರು.ಸೊರಬ ಶಾಸಕ ಮಧು ಬಂಗಾರಪ್ಪ, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶಾರದಾ ಪೂರ‍್ಯನಾಯ್ಕ, ಭದ್ರಾವತಿ ಶಾಸಕ ಅಪ್ಪಾಜಿ ಗೌಡ ನೇತೃತ್ವದಲ್ಲಿ ಕುಬಟೂರಿನಿಂದ ಶಿವಮೊಗ್ಗದ ತನಕ ನಡೆದ ಬೃಹತ್ ಪಾದಯಾತ್ರೆಯ ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿತ್ತು.ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದ ಬಳಿಕ ಎಚ್.ಡಿ.ಕುಮಾರಸ್ವಾಮಿ ಅವರು ಶಿವಮೊಗ್ಗ ತಾಲೂಕಿನ ಬುಳ್ಳಾಪುರ ಗ್ರಾಮದ ರೈತರ ಜೊತೆ ಸಂವಾದ ನಡೆಸಿದರು. ರೈತ ಕರಿಬಸಪ್ಪನವರ ಮನೆಯಲ್ಲಿ ಊಟ ಮುಗಿಸಿ, ವಾಸ್ತವ್ಯ ಹೂಡಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!