By : Oneindia Kannada Video Team
Published : November 22, 2017, 10:02

ಎಚ್ ಡಿ ಕುಮಾರಸ್ವಾಮಿ ತಂತ್ರಕ್ಕೆ ಸಿ ಪಿ ಯೋಗೇಶ್ವರ ಪ್ರತಿತಂತ್ರ

ಮಂಡ್ಯ ರಾಜಕಾರಣ : ಎಚ್ಡಿಕೆ ತಂತ್ರಕ್ಕೆ, ಸಿ.ಪಿ.ಯೋಗೇಶ್ವರ ಪ್ರತಿತಂತ್ರ! ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಕ್ಷೇತ್ರದ ರಾಜಕೀಯ ರಂಗೇರುತ್ತಿದೆ. ಕೆ.ಎಸ್.ನಂಜುಂಡೇಗೌಡ ಅವರಿಗೆ ಬಿಜೆಪಿ ಸೇರುವಂತೆ ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೇಶ್ವರ ಅವರು ಆಹ್ವಾನ ನೀಡಿದ್ದಾರೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಂತ್ರ ರೂಪಿಸಿದ್ದಾರೆ. ಕಾಂಗ್ರೆಸ್ ತೊರೆದಿರುವ ರವೀಂದ್ರ ಶ್ರೀಕಂಠಯ್ಯ ಅವರನ್ನು ಪಕ್ಷಕ್ಕೆ ಆಹ್ವಾನಿಸಿದ್ದಾರೆ. ಇದಕ್ಕೆ ಸಿ.ಪಿ.ಯೋಗೇಶ್ವರ ಅವರು ಪ್ರತಿತಂತ್ರ ರೂಪಿಸಿದ್ದಾರೆ.ಶ್ರೀರಂಗಪಟ್ಟಣ ಕ್ಷೇತ್ರ ಸದ್ಯ ಜೆಡಿಎಸ್ ವಶದಲ್ಲಿದೆ. ಕ್ಷೇತ್ರದ ಶಾಸಕರು ರಮೇಶ ಬಂಡಿಸಿದ್ದೇಗೌಡ. ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘನೆ ಮಾಡಿರುವ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.ಎಚ್.ಡಿ.ಕುಮಾರಸ್ವಾಮಿ ರವೀಂದ್ರ ಶ್ರೀಕಂಠಯ್ಯ ಅವರಿಗೆ ಆಹ್ವಾನ ನೀಡಿದ ಬಳಿಕ ಸಿ.ಪಿ.ಯೋಗೇಶ್ವರ ಕೆ.ಎಸ್.ನಂಜುಂಡೇಗೌಡ ಅವರನ್ನು ಬಿಜೆಪಿಗೆ ಆಹ್ವಾನಿಸಿರುವುದು ತಾಲೂಕಿನ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!