ಪ್ರಚೋದನೆ ಮಾಡಲೆಂದೇ ಒಂದು ಗುಂಪು ಕೆಲಸ ಮಾಡ್ತಿದೆ,ತಾಳ್ಮೆ ಕಳ್ಕೋಬೇಡಿ ಎಂದ HDK
ಚಿಕ್ಕಬಳ್ಳಾಪುರದಲ್ಲಿ ಕೆಂಪೇಗೌಡ ಜಯಂತಿ ವೇಳೆ ಗಲಾಟೆ ನಡೆದ ವಿಚಾರಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಯಾವ ಕಾರ್ಯಕರ್ತರು ಉದ್ವೇಗಕ್ಕೆ ಒಳಗಾಗುವುದು ಬೇಡ, ಪ್ರಚೋದನೆ ಮಾಡಲೆಂದೇ ಒಂದು ಗುಂಪು ಕೆಲಸ ಮಾಡ್ತಿದೆ. ಹೀಗಾಗಿ ನಮ್ಮ ಕಾರ್ಯಕರ್ತರು ಪ್ರಚೋದನೆಕಾರಿ ಹೇಳಿಕೆಗೆ ಉದ್ವೇಗಕ್ಕೆ ಒಳಗಾಗಬೇಡಿ, ಚಪ್ಪಲಿ ಎಸೆಯುವುದು ನಮ್ಮ ಸಂಸ್ಕೃತಿ ಅಲ್ಲ, ಯಾರ ವಿರುದ್ಧವು ಧಿಕ್ಕಾರ ಕೂಗುವುದು ಬೇಡ, ಸಮಾಜದಲ್ಲಿ ಅಶಾಂತಿ ಉಂಟು ಮಾಡುವುದು ಬೇಡ, ಇಂಥ ಸಂದರ್ಭದಲ್ಲಿ ಶಾಂತ ಚಿತ್ತದಲ್ಲಿ ನಿಮ್ಮ ನಡವಳಿಕೆ ಇಟ್ಟುಕೊಳ್ಳಿ ಎಂದು ಹೆಚ್.ಡಿ ಕುಮಾರಸ್ವಾಮಿ ಅವರು ಶಾಸಕ ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದರು
Video Published On: Monday, Jun 29, 2026, 02:52 [IST]


Click it and Unblock the Notifications