ಬಿಡದಿ ರೈತರ ಆಕ್ರೋಶಕ್ಕೆ ಸರ್ಕಾರವೇ ಕಾರಣ? ಕುಮಾರಸ್ವಾಮಿ ಹೊಸ ಆರೋಪ
ಬಿಡದಿ ಟೌನ್‍ಶಿಪ್ ಯೋಜನೆ ವಿರೋಧಿಸಿ ಮಂಡಹಳ್ಳಿ ಗ್ರಾಮದ ರೈತರ ಆಕ್ರೋಶಕ್ಕೆ ರಾಜ್ಯ ಸರಕಾರದ ರೈತ ವಿರೋಧಿ ಧೋರಣೆಯೇ ಕಾರಣ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪ ಮಾಡಿದರು. ಸೋಮವಾರ ದಿಲ್ಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸರಕಾರದ ಚಿತಾವಣೆಯಿಂದ ಬಿಡದಿ ಟೌನ್‍ಶಿಪ್‍ಗೆ ಜೆಎಂಸಿ ಸರ್ವೆ ನಡೆಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ತೆರಳಿದ್ದು, ಅವರ ವಿರುದ್ಧ ರೈತ ಮಹಿಳೆಯರು ಸಹಜವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.
Video Published On: Tuesday, Jul 14, 2026, 11:26 [IST]


Click it and Unblock the Notifications