By : Oneindia Kannada Video Team
Published : November 16, 2017, 05:10

ತಕ್ಷಣ ಮುಷ್ಕರ ನಿಲ್ಲಿಸಿ, ವೈದ್ಯರಿಗೆ ಹೈಕೋರ್ಟ್ ಸೂಚನೆ

ಖಾಸಗಿ ಆಸ್ಪತ್ರೆಗಳ ವೈದ್ಯರು ತಕ್ಷಣದಿಂದಲೇ ಮುಷ್ಕರವನ್ನು ನಿಲ್ಲಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ.ವೈದ್ಯರು ನಡೆಸುತ್ತಿರುವ ಪ್ರತಿಭಟನೆ ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ಈ ಸೂಚನೆ ನೀಡಿದೆ.ವಕೀಲ ಎನ್.ಪಿ.ಅಮೃತೇಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್.ಜಿ.ರಮೇಶ್, ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರ ವಿಭಾಗೀಯ ಪೀಠ ಗುರುವಾರ ಮಧ್ಯಾಹ್ನ ಈ ಸೂಚನೆ ಕೊಟ್ಟಿದೆ.ಒಂದು ದಿನದ ಕಾಲಾವಕಾಶ ಕೇಳಿದ ಖಾಸಗಿ ವೈದ್ಯರ ಪರ ವಕೀಲರ ಮನವಿಯನ್ನು ಕೋರ್ಟ್ ತಳ್ಳಿ ಹಾಕಿತು. ತಕ್ಷಣ ಕರ್ತವ್ಯಕ್ಕೆ ಹಾಜರಾಗಿ, ನಿಮ್ಮ ಸಮಸ್ಯೆ ಬಗ್ಗೆ ನಂತರ ಗಮನ ಹರಿಸೋಣ ಎಂದು ನ್ಯಾಯಾಲಯ ಹೇಳಿತು.ಸರ್ಕಾರ ಸೂಕ್ತ ನಿರ್ಧಾರವನ್ನು ಕೈಗೊಳ್ಳದಿದ್ದರೆ ನ್ಯಾಯಲಯವೇ ಮುಂದಿನ ತೀರ್ಮಾನವನ್ನು ಕೈಗೊಳ್ಳುತ್ತದೆ ಎಂದು ಹೇಳಿದ ಕೋರ್ಟ್, ಶುಕ್ರವಾರ ಬೆಳಗ್ಗೆ 10.30ಕ್ಕೆ ಅರ್ಜಿಯ ವಿಚಾರಣೆ ಮುಂದೂಡಿದೆ. ಇಂದು ಸಂಜೆ 7 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ಸಚಿವ ರಮೇಶ್ ಕುಮಾರ್, ವೈದ್ಯಕೀಯ ಸಂಘದ ಪರಾಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!