By: Oneindia Kannada Video Team
Published : November 02, 2017, 10:58

8 ರಾಜ್ಯದಗಳಳಲ್ಲಿ ಹಿಂದೂಗಳು ಅಲ್ಪಸಂಖ್ಯಾತರು : ಸುಪ್ರೀಂ ಕೋರ್ಟ್ ಗೆ ಪಿಐಎಲ್ ಸಲ್ಲಿಕೆ

Subscribe to Oneindia Kannada

ದೇಶದ 8 ರಾಜ್ಯಗಳಲ್ಲಿ ಹಿಂದೂಗಳು ಅಲ್ಪಸಂಖ್ಯಾತರಾಗಿದ್ದಾರೆ. ಆದರೆ, ಸರಿಯಾದ ಮಾನ್ಯತೆ ಸಿಕ್ಕಿಲ್ಲ. ಹೀಗಾಗಿ, ಅಧಿಕೃತ ಮಾನ್ಯತೆ ನೀಡಬೇಕೆಂದು ಕೋರಿ ಸುಪ್ರೀಂ ಕೋರ್ಟ್‍ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಕೆಯಾಗಿದೆ. ಅರುಣಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ಲಕ್ಷದ್ವೀಪ, ಮಿಜೋರಾಂ, ನಾಗಾಲ್ಯಾಂಡ್, ಮೇಘಾಲಯ, ಮಣಿಪುರ ರಾಜ್ಯಗಳಲ್ಲಿರುವ ಹಿಂದೂಗಳನ್ನು ಅಲ್ಪಸಂಖ್ಯಾತರನ್ನಾಗಿ ಗುರುತಿಸಿ ಸರ್ಕಾರಿ ಸೌಲಭ್ಯಗಳನ್ನು ನೀಡಬೇಕು ಎಂದು ಸುಪ್ರೀಂ ಕೋರ್ಟ್ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ್ ಎಂಬವರು ಪಿಐಎಲ್ ಸಲ್ಲಿಸಿದ್ದಾರೆ. ಮುಸ್ಲಿಂ, ಕೈಸ್ತ, ಸಿಖ್, ಬೌದ್ಧ ಧರ್ಮ, ಪಾರ್ಸಿ, ಧರ್ಮದ ಸಮುದಾಯಗಳನ್ನು 1993 ರಲ್ಲಿ ಕೇಂದ್ರ ಸರ್ಕಾರ ನೋಟಿಫಿಕೇಶನ್ ಹೊರಡಿಸಿ ಅಲ್ಪಸಂಖ್ಯಾತರ ಮಾನ್ಯತೆ ನೀಡಿತ್ತು. 2014ರಲ್ಲಿ ಈ ಪಟ್ಟಿಗೆ ಜೈನ ಧರ್ಮವನ್ನು ಸೇರಿಸಲಾಗಿದೆ. ಆದರೆ, 2011ರ ಜನಗಣತಿಯ ಪ್ರಕಾರ ಈ 8 ರಾಜ್ಯಗಳಲ್ಲಿ ಅಲ್ಪಸಂಖ್ಯಾತರೆನಿಸಿಕೊಂಡಿರುವ ಮುಸ್ಲಿಂ, ಕ್ರೈಸ್ತರ ಸಂಖ್ಯೆ ಅಧಿಕವಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!