By : Oneindia Kannada Video Team
Published : May 29, 2017, 06:51

ಮೇ 30ರಂದು ಬೆಂಗಳೂರಿನ ಎಲ್ಲ ಹೋಟಲ್ ಗಳು ಮೆಡಿಕಲ್ ಶಾಪ್ ಗಳು ಬಂದ್

ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ) ಜಾರಿಯನ್ನು ಖಂಡಿಸಿರುವ ಹೋಟೆಲ್ ಉದ್ಯಮಿಗಳಿ ಮೇ 30ನೇ ತಾರೀಕು ರಾಜ್ಯಾದ್ಯಂತ ಹೋಟೆಲ್, ರೆಸ್ಟುರಾಂಟ್ ಗಳನ್ನು ಮುಚ್ಚಿ, ಪ್ರತಿಭಟನೆ ನಡೆಸಲು ನಿರ್ಧಾರ ಮಾಡಿದ್ದಾರೆ. ಹೋಟೆಲ್ ಉದ್ಯಮಿಗಳ ಸಂಘದ ಅಧ್ಯಕ್ಷ ಚಂದ್ರಶೇಖರ್ ಹೆಬ್ಬಾರ್ ಈ ಬಗ್ಗೆ ಮಾಧ್ಯಮದ ಜತೆ ಮಾತನಾಡಿದ್ದಾರೆ. ಇನ್ನು ಕೇಂದ್ರ ಸರ್ಕಾರದ ಆನ್‌ಲೈನ್ ಫಾರ್ಮಸಿ ಮೂಲಕ ಔಷಧಿ ಮಾರಾಟ ಮಾಡುವ ಕ್ರಮ ಖಂಡಿಸಿ ಔಷಧ ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘ ಕರೆ ನೀಡಿರುವ ಒಂದು ದಿನ(ಮೇ 30, 2017)ದ ಮುಷ್ಕರಕ್ಕೆ ಕರ್ನಾಟಕದ ಔಷಧಿ ಮಾರಾಟಗಾರರ ಸಂಘ ಕೂಡಾ ಬೆಂಬಲ ವ್ಯಕ್ತಪಡಿಸಿದೆ.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!