ಶಹಬಾಜ್ ಶರೀಫ್ ಹೇಳಿಕೆಗೆ ಭಾರತ ಕೌಂಟರ್ | UN ವೇದಿಕೆಯಲ್ಲಿ ಭಯೋತ್ಪಾದನೆ ಬಗ್ಗೆ ಖಡಕ್ ಸಂದೇಶ
ವಿಶ್ವಸಂಸ್ಥೆಯ 81ನೇ ಮಹಾಸಭೆಯಲ್ಲಿ ಪಾಕಿಸ್ತಾನ ಪ್ರಧಾನಿ ಶಹಬಾಜ್ ಶರೀಫ್ ಅವರು ಭಾರತ-ಪಾಕಿಸ್ತಾನ ಸಂಘರ್ಷ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಧ್ಯಸ್ಥಿಕೆ ಕುರಿತು ಮಾತನಾಡಿದ್ದಾರೆ. ಇದಕ್ಕೆ ಭಾರತ ತೀವ್ರವಾಗಿ ಪ್ರತಿಕ್ರಿಯಿಸಿದ್ದು, ವಿಶ್ವಸಂಸ್ಥೆಯಲ್ಲಿ ಭಾರತದ ಪರವಾಗಿ ರಾಜತಾಂತ್ರಿಕ ಅಧಿಕಾರಿ ಪೆಟಲ್ ಗಹ್ಲೋಟ್ ಪಾಕಿಸ್ತಾನದ ವಾದವನ್ನು ತಿರಸ್ಕರಿಸಿದ್ದಾರೆ. ಭಯೋತ್ಪಾದನೆಯನ್ನು ಸಾಮಾನ್ಯಗೊಳಿಸಲು ಸಾಧ್ಯವಿಲ್ಲ ಮತ್ತು ಭಯೋತ್ಪಾದನೆಯ ವಿರುದ್ಧ ಭಾರತಕ್ಕೆ ಆತ್ಮರಕ್ಷಣೆಯ ಹಕ್ಕಿದೆ ಎಂದು ಭಾರತ ಸ್ಪಷ್ಟಪಡಿಸಿದೆ.
Video Published On: Monday, Sep 28, 2026, 11:09 [IST]


Click it and Unblock the Notifications
