By : Oneindia Kannada Video Team
Published : December 21, 2017, 10:59

ಭಾರತ vs ಲಂಕಾ ಮೊದಲ ಟಿ20 ಸಾರಾಂಶ

ಶ್ರೀಲಂಕಾ ತಂಡದ ವಿರುದ್ಧ ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್‌ನಲ್ಲಿ ಸರಣಿ ಗೆದ್ದುಕೊಂಡಿರುವ ಭಾರತ ತಂಡ ಈಗ ಟಿ20ಐ ಸರಣಿ ಮೇಲೆ ಕಣ್ಣಿಟ್ಟಿದೆ. ಶ್ರೀಲಂಕಾಕ್ಕೆ ಗೆಲ್ಲಲು 181ರನ್ ಟಾರ್ಗೆಟ್ ನೀಡಲಾಗಿತ್ತು, ಆದರೆ, 16 ಓವರ್ ಗಳಲ್ಲಿ 87 ಸ್ಕೋರಿಗೆ ಆಲೌಟ್ ಆಗಿ ಸುಲಭವಾಗಿ ಶರಣಾಗಿದೆ. ಈ ಗೆಲುವಿನ ಮೂಲಕ ಮೂರು ಪಂದ್ಯಗಳ ಟಿ20ಸರಣಿಯಲ್ಲಿ ಭಾರತ 1-0 ಮುನ್ನಡೆ ಪಡೆದುಕೊಂಡಿದೆ. 181ರನ್ ಟಾರ್ಗೆಟ್ ಚೇಸ್ ಮಾಡಿದ ಶ್ರೀಲಂಕಾ ಆರಂಭದಿಂದಲೇ ಅಳುಕಿನಿಂದ ಬ್ಯಾಟಿಂಗ್ ಮಾಡಿತು. ಲೆಗ್ ಸ್ಪಿನ್ನರ್ ಯಜುವೆಂದ್ರ ಚಾಹಲ್ 4, ಹಾರ್ದಿಕ್ ಪಾಂಡ್ಯ 3 ಹಾಗೂ ಕುಲದೀಪ್ ಯಾದವ್ 2 ವಿಕೆಟ್ ಗಳಿಸಿದರು.ಇಲ್ಲಿನ ಬಾರಬತಿ ಸ್ಟೇಡಿಯಂನಲ್ಲಿ ಮೊದಲು ಬ್ಯಾಟಿಂಗ್ ಮಾಡುತ್ತಿರುವ ರೋಹಿತ್ ಪಡೆ ಉತ್ತಮ ಆರಂಭ ಪಡೆದುಕೊಂಡಿದೆ. ಆರಂಭಿಕ ಆಟಗಾರ ಕೆಎಲ್ ರಾಹುಲ್ ಅವರು ಅಬ್ಬರ ಬ್ಯಾಟಿಂಗ್ ಪ್ರದರ್ಶಿಸಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!