By : Oneindia Kannada Video Team
Published : November 21, 2017, 05:45

ಇಂಡಿಯಾ vs ಶ್ರೀ ಲಂಕಾ 1st ಟೆಸ್ಟ್ ಈಡೆನ್ ಗಾರ್ಡೆನ್ಸ್ ಸಾರಾಂಶ

ಈಡೆನ್ ಗಾರ್ಡೆನ್ಸ್ ಮೈದಾನದಲ್ಲಿ ನಡೆದ ಭಾರತ ಹಾಗೂ ಶ್ರೀಲಂಕಾ ನಡುವಣ ಮೊದಲ ಟೆಸ್ಟ್ ಪಂದ್ಯ ರೋಚಕ ಡ್ರಾದಲ್ಲಿ ಅಂತ್ಯಗೊಂಡಿತ್ತು. ಮೊದಲ ಇನ್ನಿಂಗ್ಸ್‌ನಲ್ಲಿ 122 ರನ್‌ಗಳ ಹಿನ್ನಡೆಯ ಹೊರತಾಗಿಯೂ ದ್ವಿತೀಯ ಇನ್ನಿಂಗ್ಸ್‌ನಲ್ಲಿ ನಾಯಕ ವಿರಾಟ್ ಕೋಹ್ಲಿ (104*) ಬಾರಿಸಿದ ಅಜೇಯ ಶತಕದ ನೆರವಿನಿಂದ ಟೀಮ್ ಇಂಡಿಯಾ ಎಂಟು ವಿಕೆಟ್ ನಷ್ಟಕ್ಕೆ 352 ರನ್‌ಗಳ ಬೃಹತ್ ಮೊತ್ತ ಪೇರಿಸಿ ಡಿಕ್ಲೇರ್ ಘೋಷಿಸಿತ್ತು. ಬಳಿಕ ಪಂದ್ಯದ ಕೊನೆಯ ಅವಧಿಯಲ್ಲಿ ಗೆಲುವಿಗಾಗಿ 231 ರನ್ ಬೆನ್ನತ್ತಿದ್ದ ಶ್ರೀಲಂಕಾ ಒಂದು ಹಂತದಲ್ಲಿ 22 ರನ್‌ಗಳಿಗೆ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡು ಭಾರಿ ಸಂಕಷ್ಟಕ್ಕೆ ಸಿಲುಕಿತ್ತು. ಈ ಹಂತದಲ್ಲಿ ಕ್ರೀಸಿಗಿಳಿದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ನಿರೋಶನ್ ಡಿಕ್‌ವೆಲ್ಲ (27) ಸ್ವಲ್ಪ ಹೊತ್ತು ಆಕ್ರಮಣಕಾರಿ ಬ್ಯಾಟಿಂಗ್ ಮಾಡುವ ಮೂಲಕ ಪ್ರತಿರೋಧ ಒಡ್ಡಿದ್ದರು. ಆದರೆ ಸ್ವಲ್ಪ ಹೊತ್ತು ಕಾವೇರಿದ ವಾತಾವರಣ ಸೃಷ್ಟಿಯಾಗುವಂತಾಗಿತ್ತು. ಬಳಿಕ ಪಂದ್ಯ ಡ್ರಾದಲ್ಲಿ ಅಂತ್ಯಗೊಳ್ಳುವಾಗ ಏಳು ವಿಕೆಟ್‌ಗಳನ್ನು ಕಳೆದುಕೊಂಡ ಲಂಕಾ 75 ರನ್ ಗಳಿಸಿತ್ತು

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!