By: Oneindia Kannada Video Team
Published : December 29, 2017, 04:19

ಜನಾರ್ಧನ ಪೂಜಾರಿಯವರ ಈ ವಿಡಿಯೋ ನೋಡಿದ್ರೆ ನಿಮ್ಮ ಕಣ್ಣಲ್ಲಿ ನೀರು ಬರುತ್ತೆ

Subscribe to Oneindia Kannada

ರಾಜ್ಯ ಅರಣ್ಯ ಸಚಿವ ರಮಾನಾಥ ರೈ ತಮ್ಮ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾದ ವಿಚಾರದ ಬಗ್ಗೆ ತಿಳಿದು ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಬಿಕ್ಕಿಬಿಕ್ಕಿ ಅತ್ತ ಪ್ರಸಂಗ ನಡೆದಿದೆ.ಗುರುವಾರ ಮಂಗಳೂರಿನ ಗರೋಡಿ ಶ್ರೀ ಬ್ರಹ್ಮಬೈದರ್ಕಳ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜನಾರ್ದನ ಪೂಜಾರಿ, ಸಚಿವ ರಮಾನಾಥ ರೈ ತನ್ನ ವಿರುದ್ಧ ಅವಾಚ್ಯ ಶಬ್ದಗಳಿಂದ ಸೂ.. ಮಗ ಮತ್ತು ರ.. ಮಗ ಎಂದು ನಿಂದಿಸಿದ್ದಾರೆಂದು ಪ್ರಸ್ತಾಪಿಸಿ ಸಾರ್ವಜನಿಕ ಕಾರ್ಯಕ್ರಮದ ವೇದಿಕೆಯ ಮೇಲೆಯೇ ಗಳಗಳನೆ ಅತ್ತು ಬಿಟ್ಟರು.ಇದು ಸತ್ಯ ನ್ಯಾಯಕ್ಕಾಗಿ ಹೋರಾಡಿದ ಕೋಟಿ ಚೆನ್ನಯರ ಗರೋಡಿ. ನನ್ನ ತಾಯಿ ಚೆನ್ನಮ್ಮ. ತಾಯಿಯ ತಾಯಿ ದೇಯಿ ಬೈದೆತಿ. ಕೋಟಿ ಚೆನ್ನಯರ ತಾಯಿಯೂ ದೇಯಿ ಬೈದೆತಿ. ಹಾಗಾದ್ರೆ ನನ್ನ ತಾಯಿ ರಮಾನಾಥ ರೈ ಹೇಳಿದಂತೆ ಸೂಳೆಯೋ ಎಂದು ತೀರಾ ಗದ್ಗದಿತರಾಗಿ ಕಣ್ಣೀರಿಟ್ಟರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!