By : Oneindia Kannada Video Team
Published : March 23, 2018, 10:53

ಜಯಲಲಿತಾ ಅಪೋಲೋ ಆಸ್ಪತ್ರೆಯಲ್ಲಿದ್ದಾಗ ಎಲ್ಲಾ ಸಿಸಿಟಿವಿಗಳು ಸ್ವಿಚ್ ಆಫ್ ಆಗಿದ್ಯಾಕೆ?

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವರು ಸತ್ತು ಸ್ವರ್ಗ ಸೇರಿ ಒಂದೂಕಾಲು ವರ್ಷ ಮುಗಿಯುತ್ತ ಬಂದರೂ, ಅವರಿಗೆ ಸಂಬಂಧಿಸಿದ ಸುದ್ದಿಗಳಿಗೆ ಹಿಡಿದುಕೊಂಡಿರುವ ಭೂತ ಮಾತ್ರ ಇನ್ನೂ ಬಿಟ್ಟಿಲ್ಲ. ಇದೀಗ ಮತ್ತೊಂದು ಬೆಚ್ಚಿಬೀಳಿಸುವಂಥ ಸುದ್ದಿ ಹೊರಬಿದ್ದಿದೆ.ಎಪ್ಪತ್ತೈದು ದಿನಗಳ ಕಾಲ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಮಯದಲ್ಲಿ ಅಪೋಲೋ ಆಸ್ಪತ್ರೆಯ ಎಲ್ಲ ಸಿಸಿಟಿವಿ ಕ್ಯಾಮೆರಾಗಳನ್ನು ಆಫ್ ಮಾಡಲಾಗಿತ್ತು ಎಂಬ ಆಘಾತಕರ ಸುದ್ದಿಯನ್ನು ಅಪೋಲೋ ಆಸ್ಪತ್ರೆಯ ಚೇರ್ಮನ್ ಡಾ. ಪ್ರತಾಪ್ ಸಿ ರೆಡ್ಡಿಯವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಬಹಿರಂಗಪಡಿಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!