By : Oneindia Kannada Video Team
Published : February 19, 2018, 03:25

ವಿಕಾಸ ಪರ್ವ ಯಾತ್ರೆ ನಂತರ ಜೆಡಿಎಸ್ ಮುಂದಿದೆ ಸವಾಲುಗಳು

ಬೆಂಗಳೂರಿನ ಹೊರವಲಯದ ಯಲಹಂಕದಲ್ಲಿ ನಡೆದ ಜೆಡಿಎಸ್ ವಿಕಾಸಪರ್ವ ನಿರೀಕ್ಷೆಗೂ ಮೀರಿ ಯಶಸ್ಸು ಕಂಡಿರುವುದು ಜೆಡಿಎಸ್ ನಾಯಕರಲ್ಲಿ ಹುಮ್ಮಸ್ಸು ಮೂಡಿಸಿದೆ. ಆದರೆ, ಅಷ್ಟು ಮಾತ್ರಕ್ಕೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರದ ಗದ್ದುಗೆ ಹಿಡಿದೇ ಬಿಡುತ್ತಾರೆ ಎನ್ನುವಂತಿಲ್ಲ. ಬಿಜೆಪಿಯೊಂದಿಗೆ ಸೇರಿ ಸರ್ಕಾರ ರಚನೆ ಮಾಡಿದ ವೇಳೆ ಕೆಲವೊಂದು ಸಮುದಾಯ ಜೆಡಿಎಸ್‍ನಿಂದ ಸ್ವಲ್ಪ ಮಟ್ಟಿಗೆ ದೂರವಾಗಿದ್ದು ಸುಳ್ಳಲ್ಲ. ಆದರೆ, ಮತ್ತೆ ಸರ್ವ ಸಮುದಾಯವನ್ನು ತಮ್ಮೊಂದಿಗೆ ಕರೆದೊಯ್ಯುವ ಪ್ರಯತ್ನವನ್ನು ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡ ಮತ್ತು ಕುಮಾರಸ್ವಾಮಿ ಮಾಡಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!