By: Oneindia Kannada Video Team
Published : November 23, 2017, 03:00

ಜೆಡಿಎಸ್ ಕುಮಾರ ಪರ್ವ ಯಾತ್ರೆಯಿಂದ ಜೆಡಿಎಸ್ ಗೆ ಆಗುವ 6 ಲಾಭಗಳು

Subscribe to Oneindia Kannada

ಕುಮಾರಪರ್ವ ಯಾತ್ರೆಯಿಂದ ಜೆಡಿಎಸ್‌ಗೆ ಆಗುವ 6 ಲಾಭಗಳು! 'ಮುಖ್ಯಮಂತ್ರಿಯಾಗಿ ನನ್ನ 20 ತಿಂಗಳ ಆಡಳಿತ ಕೇವಲ ಸಿನಿಮಾ ಬಿಡುಗಡೆಗೂ ಮುನ್ನ ಬರುವ ಟ್ರೈಲರ್. ನಮಗೆ ಒಂದು ಬಾರಿ ಅವಕಾಶ ನೀಡಿ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಬೆಂಬಲಿಸಿ' ಎಂದು ಎಚ್.ಡಿ.ಕುಮಾರಸ್ವಾಮಿ ರಾಜ್ಯದ ಜನರಿಗೆ ಮನವಿ ಮಾಡುತ್ತಿದ್ದಾರೆ. 2018ರ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂಬ ಸಂಕಲ್ಪದೊಂದಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ 'ಕುಮಾರಪರ್ವ ಯಾತ್ರೆ'ಯನ್ನು ನಡೆಸುತ್ತಿದ್ದಾರೆ. ಎಚ್.ಡಿ.ದೇವೇಗೌಡರು ಅನಾರೋಗ್ಯವನ್ನು ಬದಿಗೊತ್ತಿ, ಪ್ರವಾಸ ಮಾಡುತ್ತಿದ್ದಾರೆ.ನವೆಂಬರ್ 7ರಂದು ಮೈಸೂರಿನಲ್ಲಿ ಚಾಮುಂಡೇಶ್ವರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ 'ಕುಮಾರಪರ್ವ ಯಾತ್ರೆಗೆ' ಎಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಿದ್ದಾರೆ. ಸದ್ಯ, ಅಧಿವೇಶನ ನಡೆಯುತ್ತಿರುವುದರಿಂದ ಕುಮಾರಸ್ವಾಮಿ ಅದರಲ್ಲಿ ಬ್ಯುಸಿಯಾಗಿದ್ದಾರೆ.ಕರ್ನಾಟಕ ಬಿಜೆಪಿ ಚುನಾವಣೆ ಪ್ರಚಾರಕ್ಕಾಗಿ 'ನವ ಕರ್ನಾಟಕ ಪರಿವವರ್ತನಾ ಯಾತ್ರೆ' ಆರಂಭಿಸಿದೆ. ಇದಕ್ಕೆ ಪ್ರತಿಯಾಗಿ ಜೆಡಿಎಸ್ 'ಕುಮಾರಪರ್ವ ಯಾತ್ರೆ' ಆರಂಭಿಸಿದೆ. ರಾಜ್ಯದ 224 ಕ್ಷೇತ್ರಗಳಲ್ಲಿಯೂ ಯಾತ್ರೆ ಸಂಚಾರ ನಡೆಸಲಿದೆ. ಈ ಯಾತ್ರೆಯಿಂದ ಜೆಡಿಎಸ್ ಪಕ್ಷಕ್ಕೆ ಆಗುವ ಲಾಭವೇನು?

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!