By : Oneindia Kannada Video Team
Published : January 30, 2018, 01:08

ಕರ್ನಾಟಕದಲ್ಲಿ ಬಿಜೆಪಿಯನ್ನ ಸೋಲಿಸಲು ಪಣ ತೊಟ್ಟ ಜಿಗ್ನೇಶ್ ಮೇವಾನಿ

'ಕರ್ನಾಟಕದಲ್ಲಿರುವ ಶೇ.20 ರಷ್ಟು ದಲಿತರಲ್ಲಿ 20 ಮತಗಳೂ ಬಿಜೆಪಿ ಪಾಲಾಗಬಾರದು' ಎಂದು ಗುಜರಾತ್ ನ ವಡ್ಗಾಮ್ ಶಾಸಕ ಜಿಗ್ನೇಶ್ ಮೆವಾನಿ ಹೇಳಿದ್ದಾರೆ.

ಪತ್ರಕರ್ತೆ ದಿ.ಗೌರಿ ಲಂಕೇಶ್ ಜನ್ಮದಿನದ ನಿಮಿತ್ತ ಜ.29 ರಂದು ಬೆಂಗಳೂರಿನಲ್ಲಿ ನಡೆದ 'ಗೌರಿದಿನ'ದಲ್ಲಿ ಭಾಗವಹಿಸಿದ್ದ ಜಿಗ್ನೇಶ್ ಮೆವಾನಿ ಕರ್ನಾಟಕದಲ್ಲಿ ಬಿಜೆಪಿಯನ್ನು ಸೋಲಿಸುವ ಸಂಕಲ್ಪ ಮಾಡಿದರು.

ಕರ್ನಾಟಕ ವಿಧಾನಸಭೆ ಚುನಾವಣೆ ಇನ್ನು ಕೆಲವೇ ತಿಂಗಳುಗಳಲ್ಲಿ ನಡೆಯಲಿದೆ. ಸದ್ಯಕ್ಕೆ ಕರ್ನಾಟಕ್ಕೆ ಆಗಮಿಸುವ ಬೇರೆ ರಾಜ್ಯದ ಯಾವುದೇ ನಾಯಕರು ಆಡುವ ಮಾತು ಕರ್ನಾಟಕ ವಿಧಾನಸಭೆ ಚುನಾವಣೆಯನ್ನೇ ಕೇಂದ್ರೀಕರಿಸಿರುತ್ತದೆ ಎಂಬುದು ಅಚ್ಚರಿಯ ವಿಷಯವಲ್ಲ. ಹಾಗೆಯೇ ಜಿಗ್ನೇಶ್ ಮೆವಾನಿ ಅವರೂ ಮಾತನಾಡಿದ್ದಾರೆ!

ಕೆಲವೊಮ್ಮೆ ನಾವು ಸೈದ್ಧಾಂತಿಕವಾಗಿ ರಾಜಿ ಮಾಡಿಕೊಳ್ಳಬೇಕಾಗುತ್ತದೆ. ನಮ್ಮ ಸಿದ್ಧಾಂತಕ್ಕೇ ಯಾವಾಗಲೂ ಜೋತು ಬೀಳುವುದರಿಂದ ಪ್ರಜಾಪ್ರಭುತ್ವವನ್ನು ಉಳಿಸುವುದಕ್ಕೆ ಸಾದ್ಯವಿಲ್ಲ.

ಪ್ರಜಾಪ್ರಭುತ್ವ ಉಳಿಸಲು ಬೇರೆ ಸಮಾನ ಮನಸ್ಕರೊಂದಿಗೆ ಹೊಂದಾಣಿಕೆ, ರಾಜಿ ಮಾಡಿಕೊಳ್ಳುವುದು ಅಗತ್ಯ ಎಂದು ಅವರು ಹೇಳಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!