By : Oneindia Kannada Video Team
Published : September 18, 2017, 12:02

2018ರ ವಿಧಾನಸಭೆ ಚುನಾವಣೆ : ಈ ಮೂರರಲ್ಲೊಂದು ಕ್ಷೇತ್ರದಿಂದ ಬಿಎಸ್ ವೈ ಕಣಕ್ಕೆ?

ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಮೂಲಗಳ ಪ್ರಕಾರ, ಮುಂದಿನ ಚುನಾವಣೆಯಲ್ಲಿ ಬಿಎಸ್ ವೈ ಅವರಿಗಾಗಿ ಮೂರು ಕ್ಷೇತ್ರಗಳನ್ನು ಆರಿಸಲಾಗಿದ್ದು, ಇವುಗಳಲ್ಲೊಂದು ಕ್ಷೇತ್ರದಲ್ಲಿ ಅವರು ಕಣಕ್ಕಿಳಿಯಲಿದ್ದಾರೆಂದು ಹೇಳಲಾಗಿದೆ. ಈವರೆಗೆ ಶಿಕಾರಿಪುರದಲ್ಲಿ ಸ್ಪರ್ಧಿಸುತ್ತಿದ್ದ ಅವರನ್ನು ಈ ಬಾರಿ ಉತ್ತರ ಕರ್ನಾಟಕದಿಂದ ಕಣಕ್ಕಿಳಿಸಲು ನಿರ್ಧರಿಸಲಾಗಿದ್ದು, ಹಾವೇರಿಯ ರಾಣೆಬೆನ್ನೂರು, ಬಾಗಲಕೋಟೆ ಜಿಲ್ಲೆಯ ತೇರದಾಳ ಹಾಗೂ ಬಾದಾಮಿಯಿಂದ ಅವರನ್ನು ಕಣಕ್ಕಿಳಿಸಲು ಆಲೋಚಿಸಲಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!