By : Oneindia Kannada Video Team
Published : November 08, 2017, 01:04

ಕರ್ನಾಟಕ ವಿಧಾನಸಭಾ ಚುನಾವಣೆ 2018 : ಮ್ಯಾಜಿಕ್ ನಂಬರ್ ಗಾಗಿ ಕುಮಾರಣ್ಣನ ಟಾರ್ಗೆಟ್

ಮ್ಯಾಜಿಕ್‌ ನಂಬರ್‌ಗಾಗಿ ಮೈಸೂರಿನಲ್ಲಿ ಕುಮಾರಣ್ಣನ ರಣಕಹಳೆ! 2018ರ ವಿಧಾನಸಭೆ ಚುನಾವಣೆಯಲ್ಲಿ 113 ಸ್ಥಾನಗಳಲ್ಲಿ ಜಯಗಳಿಸುವ ಗುರಿಯೊಂದಿಗೆ ಕರ್ನಾಟಕ ಜೆಡಿಎಸ್ ಪ್ರಚಾರಕ್ಕೆ ಚಾಲನೆ ನೀಡಿದೆ. 'ಕುಮಾರಪರ್ವ' ಎಂಬ ಹೆಸರಿನಲ್ಲಿ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ 'ವಿಕಾಸ ವಾಹಿನಿ' ವಿಶೇಷ ಬಸ್ಸಿನಲ್ಲಿ ರಾಜ್ಯ ಪ್ರವಾಸ ಮಾಡಲಿದ್ದಾರೆ. ಮಂಗಳವಾರ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಎಚ್.ಡಿ.ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ಎಚ್.ಡಿ.ದೇವೇಗೌಡ, ಚನ್ನಮ್ಮ ಅವರು ವಿಶೇಷ ಪೂಜೆ ಸಲ್ಲಿಸುವ ಮೂಲಕ ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಿದರು. ನಂತರ 'ವಿಕಾಸ ವಾಹಿನಿ' ವಿಶೇಷ ಬಸ್ಸಿಗೆ ಪೂಜೆ ಸಲ್ಲಿಸಿ ರಾಜ್ಯ ಪ್ರವಾಸವನ್ನು ಆರಂಭಿಸಿದರು. ನೂರಾರು ಕಾರ್ಯಕರ್ತರ ಜೊತೆ ಕುಮಾರಸ್ವಾಮಿ, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರು ಲಿಂಗದೇವರಕೊಪ್ಪ ಮೈದಾನಕ್ಕೆ ಆಗಮಿಸಿದರು. ಬೃಹತ್ ಸಮಾವೇಶದಲ್ಲಿ ಚುನಾವಣಾ ಪ್ರಚಾರಕ್ಕೆ ದೀಪ ಬೆಳಗುವ ಮೂಲಕ ಚಾಲನೆ ನೀಡಲಾಯಿತು. ಕುಮಾರಸ್ವಾಮಿ ಅವರು ಇಂದಿನಿಂದ ರಾಜ್ಯ ಪ್ರವಾಸ, ಗ್ರಾಮ ವಾಸ್ತವ್ಯವನ್ನು ಪ್ರಾರಂಭಿಸಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!