By: Oneindia Kannada Video Team
Published : January 13, 2018, 11:05

ನಾಗಠಾಣ ಕ್ಷೇತ್ರ: ಮೀಸಲು ಕ್ಷೇತ್ರದಲ್ಲಿ ಯಾವ ಪಕ್ಷದಿಂದ ಯಾವ ಅಭ್ಯರ್ಥಿ

Subscribe to Oneindia Kannada

ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾಗಿ ಗುರುತಿಸಿಕೊಂಡ ನಾಗಠಾಣ, ವಿಜಯಪುರ ಜಿಲ್ಲೆಯ ಒಂದು ಪ್ರಮುಖ ವಿಧಾನಸಭಾ ಕ್ಷೇತ್ರ. ಐತಿಹಾಸಿಕವಾಗಿಯೂ ಈ ಸ್ಥಳ ಹಲವು ಮಹತ್ವಗಳನ್ನು ಹೊಂದಿದೆ. ಬೀರಸಿದ್ದೇಶ್ವರ, ಉದಯೇಶ್ವರ, ಮಲ್ಲಿಕಾರ್ಜುನ ಸ್ವಾಮಿ ಎಂಬ ಮೂರು ದೇವಾಲಯಗಳು ಇಲ್ಲಿ ಪ್ರಸಿದ್ಧಿ ಪಡೆದಿವೆ. ಬೀರಸಿದ್ದೇಶ್ವರ ಮತ್ತು ಪರಮಾನಂದ ಜಾತ್ರೆಗಳನ್ನು ಪ್ರತಿ ವರ್ಷ ದೀಪಾವಳಿಯ ಸಮಯದಲ್ಲಿ ಆಚರಿಸಲಾಗುತ್ತದೆ.ವಿಜಯಪುರ-ಇಂಡಿ ರಸ್ತೆಯಲ್ಲಿ ಈ ಊರು ನೆಲೆಸಿದೆ. ಮಹಾರಾಷ್ಟ್ರ-ಕರ್ನಾಟಕ ಗಡಿಯಲ್ಲಿರುವುದರಿಂದ ಈ ಊರಿನ ಮೇಲೆ ಮರಾಠಿ ಪ್ರಭಾವ ಸಾಕಷ್ಟಿದೆ. ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾದ ಈ ಕ್ಷೇತ್ರವನ್ನು 2013 ರಲ್ಲಿ ಕಾಂಗ್ರೆಸ್ ನ ಪ್ರೊ.ರಾಜು ಆಲಗೂರು ಪ್ರತಿನಿಧಿಸಿದ್ದರು. ಈ ಬಾರಿಯೂ ಅವರೇ ಕಾಂಗ್ರೆಸ್ ಅಭ್ಯರ್ಥಿಯಾಗುವುದು ಬಹುತೇಕ ಖಚಿತ. ಕಳೆದ ಚುನಾವಣೆಯಲ್ಲಿ ರಾಜು ಅವರ ವಿರುದ್ಧ ಸೋತಿದ್ದ ಜೆಡಿಎಸ್ ನ ಪುಲಸಿಂಗ್ ಚೌಹಾಣ್ ಕೂಡ ಮರಳಿ ಯತ್ನ ಮಾಡಲಿದ್ದಾರೆ. ಬಿಜೆಪಿ ಅಭ್ಯರ್ಥಿ ಯಾರು ಎಂಬುದು ಇನ್ನು ತಿಳಿಯಬೇಕಷ್ಟೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!