By : Oneindia Kannada Video Team
Published : December 22, 2017, 11:14

2018ರ ಕರ್ನಾಟಕ ಚುನಾವಣೆ : ಅಹಿಂದ V/S ಹಿಂದುತ್ವ ಪ್ರಮುಖ ಪಾತ್ರವನ್ನು ವಹಿಸಲಿದೆಯಾ ?

2018ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್‌ ನಡುವೆ ಪ್ರಬಲ ಪೈಪೋಟಿ ನಡೆಯಲಿದೆ ಎಂಬುದು ಖಚಿತವಾಗುತ್ತಿದೆ. ಮೂರು ಪಕ್ಷಗಳಿಗೂ ಈ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಈ ಬಾರಿಯ ಚುನಾವಣೆಯಲ್ಲಿ ಹಲವಾರು ವಿಚಾರಗಳು ಪ್ರಮುಖ ಪಾತ್ರ ವಹಿಸುತ್ತವೆ. ಉತ್ತರ ಕರ್ನಾಟಕ ಭಾಗದಲ್ಲಿ ಕುಡಿಯುವ ನೀರಿನ ವಿಚಾರ ಪ್ರಮುಖ ಚುನಾವಣಾ ಅಸ್ತ್ರವಾಗಲಿದೆ. ಸ್ಥಳೀಯ ವಿಚಾರಗಳು ವಿಧಾನಸಭೆ ಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಅಹಿಂದ (ಅಲ್ಪಸಂಖ್ಯಾತ, ಹಿಂದುಳಿದ ಹಾಗೂ ದಲಿತ ), ಹಿಂದುತ್ವ ವಿಚಾರವೂ ಚುನಾವಣಣೆಯ ಪ್ರಮುಖ ವಿಷಯವಾಗಲಿದೆ. ರಾಜಕೀಯ ತಜ್ಞರ ಪ್ರಕಾರ ಈ ವಿಚಾರದ ಬಗ್ಗೆ ಭಾರೀ ಚರ್ಚೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಹಿಂದ ಪರವಾಗಿದ್ದಾರೆ ಎಂಬುದು ಅವರ ಅನೇಕ ನಿರ್ಧಾರಗಳ ಮೂಲಕ ಬಹಿರಂಗವಾಗಿದೆ. ಹಲವಾರು ಬಾರಿ ಅವರು ಇದೇ ವಿಚಾರ ಮುಂದಿಟ್ಟುಕೊಂಡು ಆರ್‌ಎಸ್‌ಎಸ್‌ ಮತ್ತು ಭಜರಂಗದಳದ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!