By : Oneindia Kannada Video Team
Published : January 25, 2018, 11:27

ಕರ್ನಾಟಕ ಬಂದ್: ತಡರಾತ್ರಿ ಬಸ್ ಗೆ ತಡೆಯೊಡ್ಡಿದ ಕಾರ್ಯಕರ್ತರ ಬಂಧನ

ಬೆಳಗಾವಿ, ಜನವರಿ 25: ಮಹಾದಾಯಿ ನದಿ ನೀರಿನ ಇತ್ಯರ್ಥಕ್ಕಾಗಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಬೆಳಗಾವಿಯಲ್ಲಿ ಉತ್ತಮ ಪ್ರತಿಕ್ರಿಯೆ ಲಭ್ಯವಾಗಿದೆ. ಚಿತ್ರಗಳು : ಮಹದಾಯಿಗಾಗಿ ಕರ್ನಾಟಕ ಬಂದ್ ಬೆಳಗ್ಗೆಯಿಂದಲೇ ಬೆಳಗಾವಿ ಜಿಲ್ಲೆಯಯಲ್ಲಿ ಕೆಎಸ್ ಆರ್ ಟಿಸಿ ಬಸ್ ಸೇವೆ ಸ್ಥಗಿತಗೊಳಿಸಲಾಗಿದೆ, ಜತೆಗೆ ಗೋವಾ, ಮಹಾರಾಷ್ಟ್ರ ಹಾಗೂ ರಾಜ್ಯದ ವಿವಿಧ ಭಾಗಕ್ಕೆ ತೆರಳುವ ಬಸ್ ಸೇವೆಯನ್ನೂ ಕೂಡ ಸ್ಥಗಿತಗೊಳಿಸಲಾಗಿದೆ. ಬೆಳಗಾವಿಯ ಜಿಲ್ಲೆಯ ಐದು ತಾಲೂಕುಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಬಳಗಾವಿ ಡಿಸಿ ಜಿಯಾವುಲ್ಲಾ ತಿಳಿಸಿದ್ದಾರೆ.

ಬೆಳಗಾವಿ ಜಿಲ್ಲೆ, ಬೈಲಹೊಂಗಲ, ಕಿತ್ತೂರು, ಖಾನಾಪುರ, ರಾಮದುರ್ಗ, ಸವದತ್ತಿ ತಾಲೂಕಿನಲ್ಲಿ ರಜೆ ಘೋಷಿಸಲಾಗಿದೆ. ಬಂದ್ ಗೆ ಕನ್ನಡ ಪರ ಹಾಗೂ ರೈತ ಸಂಘಟನೆಗಳಿಂದ ಬೆಂಬಲ ದೊರೆತಿದೆ. ಬೆಳಗಾವಿ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!