By : Oneindia Kannada Video Team
Published : January 25, 2018, 05:41

ಕರ್ನಾಟಕ ಬಂದ್ : ಮಂಗಳೂರಿನಲ್ಲಿ ಕರವೇ ಕಾರ್ಯಕರ್ತರು v/s ತುರವೇ ಕಾರ್ಯಕರ್ತರು

ಮಹಾದಾಯಿ ನದಿ ನೀರು ಹಂಚಿಕೆ ವಿವಾದದಲ್ಲಿ ಪ್ರಧಾನಿ ಮಧ್ಯ ಪ್ರವೇಶಕ್ಕೆ ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ 'ಕರ್ನಾಟಕ ಬಂದ್'ಗೆ ಮಂಗಳೂರಿನಲ್ಲಿ ಬೆಂಬಲ ವ್ಯಕ್ತವಾಗಿಲ್ಲ. ಇಂದಿನ ಬಂದ್ ಗೆ ದಕ್ಷಿಣ ಕನ್ನಡ ಜಿಲ್ಲೆಯ ಯಾವೊಂದು ಸಂಘಟನೆಗಳೂ ಬೆಂಬಲ ಘೋಷಿಸಿರದ ಹಿನ್ನೆಲೆಯಲ್ಲಿ ಬಂದ್ ಬಿಸಿ ಕರಾವಳಿ ಭಾಗಕ್ಕೆ ತಟ್ಟಿಲ್ಲ.

ಜಿಲ್ಲೆಯಲ್ಲಿ ಬಂದ್ ಇಲ್ಲದಿದ್ದರೂ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಗಳು ಮುಂಜಾನೆ ಸಂಚಾರ ಸ್ಥಗಿತಗೊಳಿಸಿದ್ದವು. ಇದ್ದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಸಾರ್ಜನಿಕರು ಪ್ರತಿಭಟನೆಗೆ ಮುಂದಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ಮತ್ತೆ ಬಸ್ ಸಂಚಾರ ಆರಂಭಿಸಿದ್ದಾರೆ.

ಈ ನಡುವೆ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳ ಧೋರಣೆ ವಿರೋಧಿಸಿ ತುಳು ರಕ್ಷಣಾ ವೇದಿಕೆಯ ಕಾರ್ಯಕರ್ತರು ಮಂಗಳೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರು ಪ್ರತಿಭಟನೆ ನಡೆಸಿದರು.

ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನ ಜೀವನ ಸಾಮಾನ್ಯವಾಗಿದೆ. ಎಂದಿನಂತೆ ಸರಕಾರಿ ಕಚೇರಿ, ಬ್ಯಾಂಕ್, ಆಸ್ಪತ್ರೆ, ಸೇರಿದಂತೆ ಶಾಲಾ-ಕಾಲೇಜುಗಳು ತೆರೆದಿವೆ. ಮಂಗಳೂರು ನಗರದಲ್ಲಿ ವ್ಯಾಪಾರ ವಹಿವಾಟು ಎಂದಿನಂತೆ ನಡೆಯುತ್ತಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!