By : Oneindia Kannada Video Team
Published : March 03, 2018, 02:14

ಕರ್ನಾಟಕ ಚುನಾವಣೆ 2018 : ಬಿಜೆಪಿ ಜಿಲ್ಲಾವಾರು ಸಂಭವನೀಯ ಅಭ್ಯರ್ಥಿಗಳ ಪಟ್ಟಿ

ಕರ್ನಾಟಕ ವಿಧಾನಸಭೆ ಚುನಾವಣೆಗಾಗಿ ಎಲ್ಲಾ ಪಕ್ಷಗಳು ಭರ್ಜರಿಯಾಗಿ ತಯಾರಿ ನಡೆಸುತ್ತಿವೆ. ಯಾರು ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ಜಾತ್ಯಾತೀತ ಜನತಾ ದಳ ಮಾತ್ರ 126 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಪೂರ್ಣಪ್ರಮಾಣದ ಪಟ್ಟಿಯನ್ನು ಯುಗಾದಿ ನಂತರ ಪ್ರಕಟಿಸುವ ಸಾಧ್ಯತೆಯಿದೆ. ಬಿಎಸ್ಪಿ, ಎನ್ ಸಿಪಿ, ಸಿಪಿಐ(ಎಂ) ಜತೆ ಚುನಾವಣಾ ಪೂರ್ವ ಮೈತ್ರಿ ಸಾಧಿಸಿರುವ ಜೆಡಿಎಸ್, ಮಿತ್ರಪಕ್ಷಗಳ ಅಗತ್ಯಕ್ಕೆ ತಕ್ಕಂತೆ ಟಿಕೆಟ್ ಹಂಚುತ್ತಿದೆ. ಇದೇ ರೀತಿ, ಜನವರಿ ತಿಂಗಳಿನಲ್ಲಿ ಬಿಜೆಪಿಯ 40 ಅಭ್ಯರ್ಥಿಗಳ ಪಟ್ಟಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈಗ ಮತ್ತೊಮ್ಮೆ ಜಿಲ್ಲಾವಾರು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸೋರಿಕೆಯಾಗಿದ್ದು, ವಾಟ್ಸಾಪ್ ಗ್ರೂಪ್ ಗಳಲ್ಲಿ ಹರಿದಾಡುತ್ತಿದೆ. ಯಾವ ಜಿಲ್ಲೆಯ ಯಾವ ಅಸೆಂಬ್ಲಿ ಕ್ಷೇತ್ರದಿಂದ ಯಾರಿಗೆ ಟಿಕೆಟ್ ಎಂಬುದನ್ನು ಮುಂದೆ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!