By : Oneindia Kannada Video Team
Published : April 17, 2018, 02:28

Karnataka Elections 2018 : ಕಾಂಗ್ರೆಸ್ ಹೈ ಕಮಾಂಡ್ ರಣತಂತ್ರದಿಂದ 12 ಶಾಸಕರಿಗೆ ಅನ್ಯಾಯ

ಮತ್ತೆ ಕರ್ನಾಟಕದಲ್ಲಿ ಅಧಿಕಾರಕ್ಕೇರುವ ಕನಸು ಕಾಣುತ್ತಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿ ಭಾನುವಾರ ರಾತ್ರಿ ಹೊರ ಬಿದ್ದಿದೆ. ಅನಿರೀಕ್ಷಿತ ರೀತಿಯಲ್ಲಿ 12 ಹಾಲಿ ಕಾಂಗ್ರೆಸ್ ಶಾಸಕರು ಟಿಕೆಟ್ ತಪ್ಪಿಸಿಕೊಂಡಿದ್ದಾರೆ. ಒಟ್ಟು 218 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಕಾಂಗ್ರೆಸ್ ಘೋಷಣೆ ಮಾಡಿದೆ. ಹಲವು ದಿನಗಳ ಕಾಲ ಅಳೆದೂ ತೂಗಿ ಲೆಕ್ಕಾಚಾರ ಹಾಕಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ. ಇದರ ನಡುವೆ ಹಲವು ರಾಜಕಾರಣಿಗಳ ಪುತ್ರರಿಗೂ ಟಿಕೆಟ್ ನೀಡಲಾಗಿದೆ. ಆದರೆ 12 ಹಾಲಿ ಶಾಸಕರಿಗೆ ಮಾತ್ರ ಟಿಕೆಟ್ ಸಿಕ್ಕಿಲ್ಲ. ಕಾಂಗ್ರೆಸ್ ಟಿಕೆಟ್ ತಪ್ಪಿಕೊಂಡ ಶಾಸಕರು ಮತ್ತು ಅವರ ವಿವರಗಳು ಇಲ್ಲಿವೆ. ಅವುಗಳ ಮೇಲೆ ಕಣ್ಣಾಡಿಸಿದಾಗ ಮೇಲ್ನೋಟಕ್ಕೆ ಹಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ರಣತಂತ್ರ ಹೆಣೆದಿರುವುದು ಕಂಡು ಬರುತ್ತಿದೆ.
ಕಾಂಗ್ರೆಸ್ ಹೈ ಕಮಾಂಡ್ ರಣತಂತ್ರದಿಂದ 12 ಶಾಸಕರಿಗೆ ಅನ್ಯಾಯ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!