By : Oneindia Kannada Video Team
Published : November 28, 2017, 03:07

ಕರ್ನಾಟಕ ಚುನಾವಣೆ 2018ರಲ್ಲಿ ಸ್ಪರ್ಧಿಸಲು ಸರ್ಕಾರೀ ಉದ್ಯೋಗ ಬಿಟ್ಟ ಡಿ ಕೆ ರಮೇಶ್

ಚುನಾವಣೆಗೆ ಸ್ಪರ್ಧಿಸಲು ಸರ್ಕಾರಿ ಉದ್ಯೋಗ ಬಿಟ್ಟ ಡಾ.ಡಿ.ಕೆ.ರಮೇಶ್. ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಕೆಲವು ದಿನಗಳು ಮಾತ್ರ ಬಾಕಿ ಇದೆ. ಚುನಾವಣೆಯಲ್ಲಿ ಸ್ಪರ್ಧಿಸಲು ಸರ್ಕಾರಿ ವೈದ್ಯರೊಬ್ಬರು ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ. ಕೋಲಾರದ ಶ್ರೀ ನರಸಿಂಹರಾಜ ಜಿಲ್ಲಾ ಆಸ್ಪತ್ರೆಯ ವೈದ್ಯರಾದ ಡಾ.ಡಿ.ಕೆ.ರಮೇಶ್ ಅವರು ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ. 2018ರ ಚುನಾವಣೆಯಲ್ಲಿ ಸ್ಪರ್ಧಿಸಲು ಅವರು ಸರ್ಕಾರಿ ಕೆಲಸಕ್ಕೆ ರಾಜೀನಾಮೆ ಕೊಟ್ಟಿದ್ದಾರೆ.'ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರು ನನಗೆ ಆದರ್ಶ, ಅವರಂತೆ ಸಮಾಜದಲ್ಲಿ ಬದಲಾವಣೆ ತರುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದೇನೆ. ಆದ್ದರಿಂದ, ಕೆಲಸಕ್ಕೆ ರಾಜೀನಾಮೆ ನೀಡಿದ್ದೇನೆ' ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಶಾಶ್ವತ ನೀರಾವರಿ ಯೋಜನೆಗೆ ಆಗ್ರಹಿಸಿ ನಡೆಯುತ್ತಿದ್ದ ಹೋರಾಟದಲ್ಲಿ ಡಾ.ಡಿ.ಕೆ.ರಮೇಶ್ ಸಕ್ರಿಯವಾಗಿ ತೊಡಗಿಕೊಂಡಿದ್ದರು. ಸದ್ಯ, ಸರ್ಕಾರಿ ಕೆಲಸ ಬಿಟ್ಟಿದ್ದು, ಸಂಪೂರ್ಣವಾಗಿ ರಾಜಕಾರಣದಲ್ಲಿ ತೊಡಗಿಕೊಳ್ಳಲಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!