By : Oneindia Kannada Video Team
Published : March 21, 2018, 06:09

Karnataka Elections 2018 : ಎಚ್ ಡಿ ಕುಮಾರಸ್ವಾಮಿ ಬಗ್ಗೆ ಸುಳಿವು ಕೊಟ್ಟ ಎಚ್ ಡಿ ದೇವೇಗೌಡ

ಎಚ್.ಡಿ. ಕುಮಾರಸ್ವಾಮಿ ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ನನ್ನ ಅಭ್ಯಂತರವಿಲ್ಲ ಎಂದು ಎಚ್.ಡಿ. ದೇವೇಗೌಡ ಅವರು ಸುಳಿವು ನೀಡಿದರು. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಸ್ಪರ್ಧಿಸಲು ಸೂಕ್ತ ಅಭ್ಯರ್ಥಿಗಳಿಲ್ಲ. ಅನಿತಾ ಕುಮಾರಸ್ವಾಮಿಯವರು ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ, ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಸ್ಪರ್ಧಿಸಲು ಪಕ್ಷದಿಂದ ಯಾವುದೇ ತಡೆ ಇಲ್ಲ. ಈ ಹಿಂದೆ ನಾನೂ ಕೂಡ ಸಾತನೂರು ಮತ್ತು ಹೊಳೆನರಸೀಪುರದಿಂದ ಸ್ಪರ್ಧಿಸಿದ್ದೆ ಎಂದು ಅವರು ಹೇಳಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!