By : Oneindia Kannada Video Team
Published : November 08, 2017, 12:03

ಕರ್ನಾಟಕ ಚುನಾವಣೆ 2018 : ಯಡಿಯೂರಪ್ಪ ಆಪ್ತ ಕಾಪು ಸಿದ್ಧಲಿಂಗಸ್ವಾಮಿಗೆ ಟಿಕೆಟ್ ಇಲ್ಲ

ಕಾ.ಪು.ಸಿದ್ದಲಿಂಗಸ್ವಾಮಿ ಕೈತಪ್ಪಲಿದೆ ವರುಣಾ ಕ್ಷೇತ್ರದ ಟಿಕೆಟ್? ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಕಣ ರಂಗೇರುತ್ತಿದೆ. ಮೈಸೂರಿನ ವರುಣಾ ಕ್ಷೇತ್ರದಲ್ಲಿ ಈ ಬಾರಿ ಕಾ.ಪು.ಸಿದ್ದಲಿಂಗಸ್ವಾಮಿ ಅವರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ. 2013ರ ಚುನಾವಣೆಯಲ್ಲಿ ಸಿದ್ದರಾಮಯ್ಯ ವಿರುದ್ಧ ಕಾ.ಪು.ಸಿದ್ದಲಿಂಗಸ್ವಾಮಿ ಸ್ಪರ್ಧಿಸಿದ್ದರು. ಮಾಜಿ ಮುಖ್ಯಮಂತ್ರಿ ಮತ್ತು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಕಾ.ಪು.ಸಿದ್ದಲಿಂಗ ಸ್ವಾಮಿ ಅವರಿಗೆ ಈ ಬಾರಿ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕ್ಷೇತ್ರದಲ್ಲಿ ಈ ಬಾರಿ ಯಡಿಯೂರಪ್ಪ ತಂಗಿಯ ಮಗ ಅಶೋಕ್ ಅಥವ ರಮೇಶ್ ಸ್ಪರ್ಧಿಸುವ ಸಾಧ್ಯತೆ ಇದೆ.ಯಡಿಯೂರಪ್ಪ ಅವರು ಬಿಜೆಪಿ ತೊರೆದು ಕೆಜೆಪಿ ಕಟ್ಟಿದಾದ ಕಾ.ಪು.ಸಿದ್ದಲಿಂಗ ಸ್ವಾಮಿ ಚುನಾವಣೆಗೆ ಸ್ಪರ್ಧಿಸಿದ್ದರು. 2013ರ ಚುನಾವಣೆಯಲ್ಲಿ ಕೆಜೆಪಿ ಅಭ್ಯರ್ಥಿಯಾಗಿ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಅವರು, 54,744 ಮತಗಳನ್ನು ಪಡೆದಿದ್ದರು. ಈಗ ಯಡಿಯೂರಪ್ಪ ಬಿಜೆಪಿಗೆ ಮರಳಿದ್ದು, ಪಕ್ಷದ ರಾಜ್ಯಾಧ್ಯಕ್ಷರು. 2018ರ ಚುನಾವಣೆಯ ಮುಖ್ಯಮಂತ್ರಿ ಅಭ್ಯರ್ಥಿ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!