By : Oneindia Kannada Video Team
Published : March 01, 2018, 10:32

ಕರ್ನಾಟಕ 2nd ಪಿ ಯು ಸಿ ಪರೀಕ್ಷೆ 2018 : ಇಂದಿನಿಂದ ಆರಂಭ

ದ್ವಿತೀಯ ಪಿಯುಸಿ 2018 ನೇ ಸಾಲಿನ ವಾರ್ಷಿಕ ಪರೀಕ್ಷೆ ಇಂದಿನಿಂದ ಆರಂಭವಾಗಲಿದ್ದು, ಮಾರ್ಚ್ 17 ರವರೆಗೆ ನಡೆಯಲಿದೆ. ಒಟ್ಟು1004 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 6.90 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಈ ಪೈಕಿ 3.52 ಲಕ್ಷ ವಿದ್ಯಾರ್ಥಿಗಳು ಹಾಗೂ 3.37 ವಿದ್ಯಾಥಿನಿಯರಿದ್ದಾರೆ. ಪರೀಕ್ಷಾ ಭದ್ರತೆಗಾಗಿ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬರಂತೆ 32 ಜಂಟಿ ನಿರೀಕ್ಷಕ ಮೇಲ್ವಿಚಾರಕರನ್ನು ಯಾದೃಚ್ಛಿಕವಾಗಿ ಆಯ್ಕೆ ಮಾಡುವುದರಿಂದ ಈ ಬಾರಿ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪರೀಕ್ಷಾ ಕೇಂದ್ರವೆಂದು ಗುರುತಿಸುವುದನ್ನು ಕೈಬಿಡಲಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!