By : Oneindia Kannada Video Team
Published : February 09, 2018, 02:51

ಕರ್ನಾಟಕದಲ್ಲಿ ಶುರುವಾಗಿದೆ ಮೈನಸ್ ಡಿಗ್ರಿ ಪಾಲಿಟಿಕ್ಸ್

ಕೆಲ ಕಾಲದ ಹಿಂದೆ ಪ್ಲಸ್ ಡಿಗ್ರಿ ಪಾಲಿಟಿಕ್ಸ್ ಕಡೆ ರಾಜಕೀಯ ಪಕ್ಷಗಳು ಹೆಚ್ಚಾಗಿ ಗಮನ ಹರಿಸುತ್ತಿದ್ದವು. ಆದರೆ ಈಗ ಪ್ಲಸ್ ಡಿಗ್ರಿ ಪಾಲಿಟಿಕ್ಸ್ ಗಿಂತ ಮುಖ್ಯವಾಗಿ ಮೈನಸ್ ಡಿಗ್ರಿ ಪಾಲಿಟಿಕ್ಸ್ ಮಾಡಬೇಕು ಎಂಬುದು ರಾಜಕೀಯ ಪಕ್ಷಗಳ ರಣತಂತ್ರವೇ ಆಗಿ ಹೋಗಿದೆ. 2013ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಕೇಂದ್ರದ ಕಾಂಗ್ರೆಸ್ ನಾಯಕರು ಅನುಸರಿಸಿದ್ದು ಮೈನಸ್ ಡಿಗ್ರಿ ಪಾಲಿಟಿಕ್ಸ್ ಅನ್ನೇ. ಅದಕ್ಕೂ ಮುಂಚಿನ ದಿನಗಳಲ್ಲಿ ತಮ್ಮ ಶಕ್ತಿಯನ್ನು ವರ್ಧಿಸಿಕೊಂಡು ಎದುರಾಳಿಗಳ ದೌರ್ಬಲ್ಯದ ಲಾಭ ಪಡೆದರೆ ಅಧಿಕಾರಕ್ಕೆ ಬರುವುದು ಸುಲಭ ಎಂಬ ನಂಬಿಕೆಯಿತ್ತು. ಆದರೆ 2013ರ ಚುನಾವಣೆಯ ವೇಳೆಗೆ ಕೇಂದ್ರದ ಯುಪಿಎ ಸರ್ಕಾರದ ಚುಕ್ಕಾಣಿ ಹಿಡಿದಿದ್ದ ಕಾಂಗ್ರೆಸ್ ನಾಯಕರು ಮೈನಸ್ ಡಿಗ್ರಿ ಪಾಲಿಟಿಕ್ಸ್ ಅನ್ನು ಕಣ್ಣಿಗೆ ಕಾಣುವಷ್ಟು ಸ್ಪಷ್ಟವಾಗಿ ಮಾಡಿದರು. ಆ ಸಂದರ್ಭದಲ್ಲಿ ಬಿಜೆಪಿ ಯಾವ ಕಾರಣಕ್ಕಾಗಿ ಮೂರು ಹೋಳುಗಳಾಯಿತು ಎಂಬುದನ್ನು ಗಮನಿಸಿದರೆ ಮೈನಸ್ ಡಿಗ್ರಿ ಪಾಲಿಟಿಕ್ಸ್ ನ ಮಹತ್ವ ಅರ್ಥವಾಗುತ್ತದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!