By : Oneindia Kannada Video Team
Published : November 20, 2017, 04:22

ಕೊಹ್ಲಿ ಭರ್ಜರಿ ಶತಕ, ಲಂಕಾಕ್ಕೆ 231ರನ್ ಟಾರ್ಗೆಟ್

ಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಐದನೇ -ದಿನವಾದ ಇಂದು ಪ್ರವಾಸಿ ಶ್ರೀಲಂಕಾ ತಂಡದ ವಿರುದ್ಧ ಟೀಂ ಇಂಡಿಯಾ ನಾಯಕ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಶ್ರೀಲಂಕಾಕ್ಕೆ ಗೆಲ್ಲಲು 231ರನ್ ಟಾರ್ಗೆಟ್ ನೀಡಲಾಗಿದೆ. ನಾಯಕ ಕೊಹ್ಲಿ ಬಾರಿಸಿದ ಆಕರ್ಷಕ ಶತಕದ ನೆರವಿನಿಂದ ಟೀಂ ಇಂಡಿಯಾ ತನ್ನ ಎರಡನೇ ಇನ್ನಿಂಗ್ಸ್ ನಲ್ಲಿ 352/8 ಸ್ಕೋರ್ ಮಾಡಿ ಡಿಕ್ಲೇರ್ ಮಾಡಿಕೊಂಡಿದೆ. ಆರಂಭಿಕ ಆಟಗಾರರಾದ ಶಿಖರ್ ಧವನ್ 94 ಹಾಗೂ ಕೆಎಲ್ ರಾಹುಲ್ 79ರನ್ ಗಳಿಸಿ ಉತ್ತಮ ಅಡಿಪಾಯ ಹಾಕಿಕೊಟ್ಟರು. ನಾಯಕ ಕೊಹ್ಲಿ ಅವರು 119 ಎಸೆತಗಳಲ್ಲಿ 12 ಬೌಂಡರಿ ಹಾಗೂ 2 ಸಿಕ್ಸರ್ ಇದ್ದ 104ರನ್ ಗಳಿಸಿ ಅಜೇಯರಾಗಿ ಉಳಿದರು. 88.4 ಓವರ್ ಗಳಲ್ಲಿ 352/8 ಸ್ಕೋರ್ ಆಗಿದ್ದಾಗ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡ ಭಾರತ, ಲಂಕಾಕ್ಕೆ 231ರನ್ ಗಳ ಟಾರ್ಗೆಟ್ ನೀಡಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!