By : Oneindia Kannada Video Team
Published : October 27, 2017, 05:20

ಮೈಸೂರು : ಸಿದ್ದರಾಮಯ್ಯ ತವರು ಕ್ಷೇತ್ರದಿಂದ ಕುಮಾರಸ್ವಾಮಿ ರಾಜ್ಯ ಪ್ರವಾಸ ಆರಂಭ

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ರಾಜ್ಯ ಪ್ರವಾಸ ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಕ್ಷೇತ್ರದಿಂದ ಆರಂಭವಾಗಲಿದೆ. ನ.3ರಂದು ಕುಮಾರಸ್ವಾಮಿ ಅವರ ರಾಜ್ಯ ಪ್ರವಾಸಕ್ಕೆ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಚಾಲನೆ ಸಿಗಲಿದೆ..ಎಚ್.ಡಿ.ಕುಮಾರಸ್ವಾಮಿ ಅವರ ರಾಜ್ಯ ಪ್ರವಾಸದ ಮಾರ್ಗ ಅಂತಿವಾಗಿದೆ. ನ.3ರಂದು ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಬಳಿಕ ಚಾಮುಂಡೇಶ್ವರಿ ಕ್ಷೇತ್ರದಿಂದ ರಾಜ್ಯ ಪ್ರವಾಸ ಆರಂಭಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜಕೀಯ ಮರುಜೀವ ನೀಡಿದ ಕ್ಷೇತ್ರ ಚಾಮುಂಡೇಶ್ವರಿ. 2018ರ ಚುನಾವಣೆಗೆ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಈಗಾಗಲೇ ಅವರು ಘೋಷಣೆ ಮಾಡಿದ್ದಾರೆ. ಆದ್ದರಿಂದ, ಅಲ್ಲಿಂದಲೇ ಕುಮಾರಸ್ವಾಮಿ ಪ್ರವಾಸ ಆರಂಭಿಸುತ್ತಿದ್ದಾರೆ...ಎಚ್.ಡಿ.ಕುಮಾರಸ್ವಾಮಿ ಅವರು ಉತ್ತರ ಕರ್ನಾಟಕ ಭಾಗದ ಪ್ರವಾಸ ಕೈಗೊಳ್ಳುವ ಬಗ್ಗೆ ಇನ್ನೂ ಅಂತಿಮ ನಿರ್ಧಾರವಾಗಿಲ್ಲ. ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ದೇವರಹಿಪ್ಪರಗಿ ಕ್ಷೇತ್ರದ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಉತ್ತರ ಕರ್ನಾಟಕದಲ್ಲಿ ಪ್ರವಾಸ ಮುನ್ನಡೆಸುವ ಸಾಧ್ಯತೆ ಇದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!