By : Oneindia Kannada Video Team
Published : January 23, 2018, 06:29

ಕುಮಟಾ ರಾಜಕಾರಣ : 4 ಬಿಜೆಪಿ ನಾಯಕರು ಬಿಜೆಪಿಗೆ ಸೇರುವ ಸಾಧ್ಯತೆ

ಕುಮಟಾ- ಹೊನ್ನಾವರ ವಿಧಾನಸಭಾ ಕ್ಷೇತ್ರದ ರಾಜಕಾರಣದಲ್ಲಿ ಹೊಸ ಸುದ್ದಿ ಸದ್ದು ಮಾಡುತ್ತಿದೆ. ಬಿಜೆಪಿ‌ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿದ್ದ ನಾಲ್ವರು ನಾಯಕರು ಜೆಡಿಎಸ್ ಸೇರುವ ಬಗ್ಗೆ ಗಾಳಿ ಸುದ್ದಿ ಹರಿದಾಡುತ್ತಿದೆ.

ಈ ಕುರಿತು ಜೆಡಿಎಸ್‌ನ ಕುಮಟಾ ಕ್ಷೇತ್ರದ ಘೋಷಿತ ಅಭ್ಯರ್ಥಿ ಪ್ರದೀಪ ನಾಯಕ ದೇವರಬಾವಿ ಸುಳಿವು ಕೊಟ್ಟಿದ್ದಾರೆ. 'ನಾಲ್ವರು ಬಿಜೆಪಿಗರು ಜೆಡಿಎಸ್‌ಗೆ ಬರಲಿದ್ದಾರೆ. ಅದರಲ್ಲಿ ಓರ್ವ ಬಲಿಷ್ಠ ಮುಖಂಡರು ಕೂಡಾ ಸೇರಿದ್ದಾರೆ' ಎಂದು ಕೆಲವು ದಿನಗಳ ಹಿಂದೆ ಕಾರ್ಯಕ್ರಮದಲ್ಲಿ ಹೇಳಿಕೆ ಕೊಟ್ಟಿದ್ದರು.

ಕುಮಟಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ. ಜೆಡಿಎಸ್‌ ಪಕ್ಷದಿಂದ ಮಾಜಿ ಶಾಸಕ ದಿನಕರ ಶೆಟ್ಟಿ ಬಿಜೆಪಿಗೆ ಬಂದಿರುವುದು ಪಕ್ಷಕ್ಕೆ ಬಲ ತಂದಿದೆ. ಆದರೆ, ಇನ್ನುಳಿದ ಆಕಾಂಕ್ಷಿಗಳಲ್ಲಿ ಅಸಮಾಧಾನ ತಂದಿದೆ.

ಸಿನಿಮಾ ನಿರ್ಮಾಪಕ, ಬೆಳಗಾವಿ, ಬೆಂಗಳೂರಿನಲ್ಲಿ ವಾಸವಾಗಿರುವ ಸುಬ್ರಾಯ್ ವಾಳ್ಕೆ, ಉದ್ಯಮಿ ಯಶೋಧರ ನಾಯ್ಕ ಕೂಡ ಬಿಜೆಪಿಯ ಟಿಕೆಟ್ ಆಕಾಂಕ್ಷಿಗಳು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!