By : Oneindia Kannada Video Team
Published : December 26, 2017, 06:43

ಬೆಂಗಳೂರಿನಲ್ಲಿ ಕಾವೇರಿದ ಮಹದಾಯಿ ಧರಣಿ : ರೈತರ ಬಳಿ ಮಾತನಾಡಿದ ಯಡಿಯೂರಪ್ಪ

ಕಳೆದ ನಾಲ್ಕು ದಿನಗಳಿಂದ ಬೆಂಗಳೂರು ಮಲ್ಲೇಶ್ವರಂ ಬಿಜೆಪಿ ಕಚೇರಿ ಮುಂದೆ ನಡೆಯುತ್ತಿದ್ದ ಮಹದಾಯಿ ಹೋರಾಟದ ಸ್ಥಳಕ್ಕೆ ಕೊನೆಗೂ ಬಿ ಎಸ್ ಯಡಿಯೂರಪ್ಪ ಭೇಟಿ ನೀಡಿದ್ದು, ಸಂಧಾನ ಸಭೆ ವಿಫಲವಾಗಿದೆ. ಮಹದಾಯಿ ಹೋರಾಟಗಾರರ ಮನವೊಲಿಸಲು ಯಡಿಯೂರಪ್ಪ ಸರ್ಕಸ್ ನಡೆಸಿದರೂ ಪ್ರಯೋಜನಾವಾಗಿಲ್ಲ.'ಮಹದಾಯಿ ಯೋಜನೆ ವಿಚಾರದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ. ರೈತರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಯ ಮುಂದೆ ಧರಣಿ ನಡೆಸಲಿ' ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.ಮಲ್ಲೇಶ್ವರಂ ಬಿಜೆಪಿ ಕಚೇರಿ ಮುಂದೆ ಧರಣಿ ನಡೆಸುತ್ತಿರುವ ರೈತರ ಜೊತೆ ಮಾತುಕತೆ ನಡೆಸಿದ ಬಳಿಕ, ಯಡಿಯೂರಪ್ಪ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. ರೈತರ ಜೊತೆಗಿನ ಯಡಿಯೂರಪ್ಪ ಮಾತುಕತೆ ವಿಫಲವಾಗಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದಂತೆ ಬಿಜೆಪಿ ನಾಯಕರನ್ನು ನಾವು ಒಪ್ಪಿಸಿದ್ದೇವೆ. ಗೋವಾ ಕಾಂಗ್ರೆಸ್‌ ನಾಯಕರನ್ನು ಒಪ್ಪಿಸಿ ಯೋಜನೆ ಜಾರಿಗೆ ಪ್ರಯತ್ನ ಮಾಡಬೇಕಿರುವುದು ಸಿದ್ದರಾಮಯ್ಯ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!