By : Oneindia Kannada Video Team
Published : February 10, 2018, 01:09

ಮಹಾಮಸ್ತಕಾಭಿಷೇಕ 2018, ಶ್ರವಣಬೆಳಗೊಳ : ಹಿನ್ನೆಲೆ ಹಾಗು ಮಹತ್ವ

ರಾಜ್ಯ, ಸಂಪತ್ತು, ಅಧಿಕಾರ ಎಲ್ಲದರ ವ್ಯಾಮೋಹ ಬಿಟ್ಟು ವೈರಾಗ್ಯಮೂರ್ತಿಯಾಗಿ ನಿಂತ ಬಾಹುಬಲಿಗೆ ಪ್ರತಿ 12 ವರ್ಷಕ್ಕೊಮ್ಮೆ ಮಹಾಮಜ್ಜನ ನಡೆಯುವುದು ಜನಜನಿತ ಸಂಗತಿ. ಈಗಾಗಲೇ(ಫೆ.7) ಹಾಸನದ ಶ್ರವಣಬೆಳಗೊಳದಲ್ಲಿ ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ವಿಧ್ಯುಕ್ತ ಚಾಲನೆ ದೊರೆತಿದೆ. ಮಹಾಮಜ್ಜನ ಫೆ.17 ರಂದು ನಡೆಯಲಿದ್ದು, ದೇಶ ವಿದೇಶಗಳಿಂದ ಈ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಸಿಕೊಳ್ಳಲು ಜನರು ಆಗಮಿಸುತ್ತಿದ್ದಾರೆ.ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ ಈ ಮಹಾಮಸ್ತಕಾಭಿಷೇಕ ಜೈನರ ಪಾಲಿಗೆ ಅತ್ಯಂತ ದೊಡ್ಡ ಹಬ್ಬ. ಲಕ್ಷಾಂತರ ಸಂಖ್ಯೆಯಲ್ಲಿ ಜೈನರು ಆಗಮಿಸಿ ವೈರಾಗ್ಯ ಮೂರ್ತಿಯ ಮಹಾಮಜ್ಜನದ ಸಂಭ್ರಮವನ್ನು ಕಂಡು ಕೃತಾರ್ಥರಾಗುತ್ತಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!