ಚುನಾವಣಾ ಅಕ್ರಮ ಆರೋಪ; ಪಶ್ಚಿಮ ಬಂಗಾಳದಾದ್ಯಂತ ಮರುಮತದಾನಕ್ಕೆ ಮಮತಾ ಆಗ್ರಹ
ಪಶ್ಚಿಮ ಬಂಗಾಳದ 2026ರ ವಿಧಾನಸಭಾ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ಈಗ ದೇಶದ ರಾಜಕೀಯದಲ್ಲಿ ಹೊಸ ಬಿರುಗಾಳಿ ಎದ್ದಿದೆ. ಚುನಾವಣೆಯಲ್ಲಿ ಬೃಹತ್ ಪ್ರಮಾಣದ ಅಕ್ರಮ ನಡೆದಿದೆ ಎಂದು ಗಂಭೀರ ಆರೋಪ ಮಾಡಿರುವ ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಮಮತಾ ಬ್ಯಾನರ್ಜಿ, ರಾಜ್ಯದಾದ್ಯಂತ ಮರುಮತದಾನ ನಡೆಸುವಂತೆ ಗುಡುಗಿದ್ದಾರೆ. ಅಷ್ಟೇ ಅಲ್ಲದೆ, ಅಕ್ರಮಕ್ಕೆ ಸಾಥ್ ನೀಡಿದ ಆರೋಪದ ಮೇಲೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಕೂಡಲೇ ಬಂಧಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ, ಭಾರತೀಯ ಜನತಾ ಪಾರ್ಟಿ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಒಂದು ಜಂಟಿ ಸಂಸ್ಥೆಯಂತೆ ಕೆಲಸ ಮಾಡಿದ್ದಾರೆ ಎಂದು ನೇರ ವಾಗ್ದಾಳಿ ನಡೆಸಿದರು.
Video Published On: Thursday, Sep 24, 2026, 12:19 [IST]


Click it and Unblock the Notifications
