By : Oneindia Kannada Video Team
Published : January 16, 2018, 10:14

ದೀಪಕ್ ರಾವ್ ಹತ್ಯೆ ಪ್ರಕರಣ: ಮತ್ತಿಬ್ಬರ ಬಂಧನ

ನಗರ ಹೊರವಲಯದ ಕಾಟಿಪಳ್ಳ ದಲ್ಲಿ ನಡೆದ ದೀಪಕ್ ರಾವ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಾಟಿಪಳ್ಳ ನಿವಾಸಿಗಳಾದ ಅಬ್ದುಲ್ ಅಜೀಜ್ ( 42), ಅಬ್ದುಲ್ ಅಜೀಮ್ (34) ಎಂದು ಗುರುತಿಸಲಾಗಿದೆ.

ಜನವರಿ 3 ರಂದು ಕಾಟಿಪಳ್ಳದಲ್ಲಿ ದೀಪಕ್ ರಾವ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ಕುರಿತು ತನಿಖೆ ನಡೆಸಿದ್ದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ದುಷ್ಕರ್ಮಿಗಳನ್ನು ಬೆನ್ನಟ್ಟಿ ಬಂಧಿಸಿದ್ದರು. ದೀಪಕ್ ರಾವ್ ಕೊಲೆಯಾದ ದಿವಸವೇ ನಾಲ್ವರನ್ನು ಪೊಲೀಸರು ಬಂಧಿಸಿದ್ದರು.

ಬಂಧಿತ ಆರೋಪಿಗಳು ನೀಡಿದ ಮಾಹಿತಿಯ ಮೇರೆಗೆ ಈ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಲ್ಲಿ ಅಬ್ದುಲ್ ಅಜೀಜ್ ದೀಪಕ್ ರಾವ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಎಂದು ಹೇಳಲಾಗಿದ್ದು.ಕೊಲೆ ಮಾಡಲು ಮಾರಕಾಸ್ತ್ರ ಸೇರಿದಂತೆ ಹಣದ ವ್ಯವಸ್ಥೆ ಮಾಡಿದ್ದ ಎಂದು ಹೇಳಲಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!