By: Oneindia Kannada Video Team
Published : January 27, 2017, 12:10

ಲೈಂಗಿಕ ದೌರ್ಜನ್ಯ ಆರೋಪ, ಮೇಘಾಲಯ ರಾಜ್ಯಪಾಲ ರಾಜೀನಾಮೆ

Subscribe to Oneindia Kannada

ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮೇಘಾಲಯ ರಾಜ್ಯಪಾಲ ವಿ.ಷಣ್ಮುಘನಾಥನ್ ರಾಜೀನಾಮೆ ಸಲ್ಲಿಸಿದ್ದಾರೆ. ಷಣ್ಮುಘನಾಥನ್ ಅವರನ್ನು ಆ ಸ್ಥಾನದಿಂದ ಕಿತ್ತೊಗೆಯಬೇಕು ಎಂದು ಆಗ್ರಹಿಸಿ ರಾಜ ಭವನದ ಉದ್ಯೋಗಿಗಳು ಪ್ರತಿಭಟನೆ ನಡೆಸಿದ ಕೆಲ ಗಂಟೆಗಳಲ್ಲಿ ರಾಜೀನಾಮೆ ಸುದ್ದಿ ಹೊರಬಿದ್ದಿದೆ. ಲೈಂಗಿಕ ದೌರ್ಜನ್ಯದ ಆರೋಪದ ಬಗ್ಗೆ ರಾಜ ಭವನದ ಉದ್ಯೋಗಿಗಳು ರಾಷ್ಟ್ರಪತಿ ಹಾಗೂ ಪ್ರಧಾನಿಗೆ ಪತ್ರ ಬರೆದು, ಷಣ್ಮುಘನಾಥನ್ ಅವರನ್ನು ರಾಜ್ಯಪಾಲ ಸ್ಥಾನದಿಂದ ತೆಗೆಯಬೇಕು. ಅವರಿಂದ ರಾಜ್ಯಪಾಲ ಸ್ಥಾನದ ಘನತೆ ಹಾಳಾಗುತ್ತಿದೆ ಎಂದು ತಿಳಿಸಿದ್ದರು. ಆ ಪತ್ರಕ್ಕೆ 98 ಉದ್ಯೋಗಿಗಳು ಸಹಿ ಮಾಡಿದ್ದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!