By : Oneindia Kannada Video Team
Published : November 18, 2017, 12:32

ಟೀಕೆ ಮಾಡುತ್ತಿದ್ದವರ ಬಾಯಿ ಮುಚ್ಚುವಂತೆ ಮಾಡಿದೆ ಮೂಡೀಸ್ ರೇಟಿಂಗ್

ಮೂಡೀಸ್ ರೇಟಿಂಗ್ ಕೇಂದ್ರಕ್ಕೆ ಹೊಸ ಚೈತನ್ಯ ತುಂಬಿದಂತಿದೆ. ನೋಟ್ ಬ್ಯಾನ್, ಜಿ.ಎಸ್.ಟಿ ಅನ್ನು ವಿಷಯವಾಗಿರಿಸಿಕೊಂಡು ಕೇಂದ್ರವನ್ನು ಟೀಕೆ ಮಾಡುತ್ತಿದ್ದವರ ಬಾಯಿ ಮುಚ್ಚುವಂತೆ ಮಾಡಿದೆ ಮೂಡೀಸ್ ರೇಟಿಂಗ್. ಮೂಡಿಸ್ ರೇಟಿಂಗ್ ಸಿಕ್ಕಿದ್ದರಿಂದ ಉತ್ಸಾಹ ಹೆಚ್ಚಿಸಿಕೊಂಡಿರುವ ಕೇಂದ್ರ ಸರ್ಕಾರ ಹಣಕಾಸು ಇಲಾಖೆ. ಈಗ ಮತ್ತೊಂದು ದಿಟ್ಟ ಹೆಜ್ಜೆ ಇಡಲು ಹೊರಟಿದೆ. ಅಂದು ಕೊಂಡತೆ ನಡೆದರೆ ಹಣಕಾಸು ವ್ಯವಹಾರ ಹೆಚ್ಚು ಪಾರದರ್ಶಕವಾಗಿ ತೆರಿಗೆ ಸೋರಿಕೆ ಗಣನೀಯವಾಗಿ ಕಡಿಮೆಯಾಗಲಿದೆ. ನೂರು ಕೋಟಿ ಆಧಾರ್ ಕಾರ್ಡ್ಗಳನ್ನು ನೂರು ಕೋಟಿ ಬ್ಯಾಂಕ್ ಖಾತೆ ಮತ್ತು ಮೊಬೈಲ್ ಸಂಖ್ಯೆಗಳಿಗೆ ಲಿಂಕ್ ಮಾಡುವ ಗುರಿ ನಿಗದಿಪಡಿಸಿಕೊಂಡಿದೆ. ಈ ಗುರಿ ಈಡೇರಿದರೆ ಚಲಾವಣೆಯಲ್ಲಿರುವ 6 ಲಕ್ಷ ಕೋಟಿಯಷ್ಟು ಹೆಚ್ಚಿನ ಮೌಲ್ಯದ ನೋಟುಗಳ ಸಂಖ್ಯೆ ಕಡಿಮೆಯಾಗುತ್ತದೆ ಹಾಗೂ ಡಿಜಿಟಲ್ ವ್ಯವಹಾರಕ್ಕೆ ಭಾರಿ ಉತ್ತೇಜನ ಸಿಗುತ್ತದೆ. ಟೀಕೆ ಮಾಡುತ್ತಿದ್ದವರ ಬಾಯಿ ಮುಚ್ಚುವಂತೆ ಮಾಡಿದೆ ಮೂಡೀಸ್ ರೇಟಿಂಗ್

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!