By : Oneindia Kannada Video Team
Published : February 19, 2018, 06:42

ನರೇಂದ್ರ ಮೋದಿಯವರನ್ನ ಸ್ವಾಗತ ಮಾಡಲು ನೆರೆದ ಜನಸಾಗರ

ಕರ್ನಾಟಕ ವಿಧಾನಸಭಾ ಚುನಾವಣೆಗೆ 3 ತಿಂಗಳು ಇರುವಂತೆ ಎಲ್ಲ ಪಕ್ಷಗಳಲ್ಲೂ ರಾಜಕೀಯ ಚಟುವಟಿಕೆಗಳು ಆರಂಭವಾಗಿದೆ. ಕೆಲ ದಿನಗಳ ಹಿಂದಷ್ಟೇ ರಾಜ್ಯಕ್ಕೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಮತ್ತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಚುನಾವಣೆ ರಣಕಹಳೆ ಮೊಳಗಿಸಲಿದ್ದಾರೆ. ಫೆಬ್ರವರಿ 4ರಂದು ಬಿಜೆಪಿ ಪರಿವರ್ತನಾ ಯಾತ್ರೆ ಸಮಾರೋಪ ಕಾರ್ಯಕ್ರಮಕ್ಕಾಗಿ ಬೆಂಗಳೂರಿಗೆ ಬಂದಿದ್ದ ಪ್ರಧಾನಿ ಮೋದಿ, 15 ದಿನಗಳ ನಂತರ ಮತ್ತೊಮ್ಮೆ ರಾಜ್ಯಕ್ಕೆ ಬಂದಿದ್ದಾರೆ. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಎರಡನೇ ಬಾರಿಗೆ ಮೈಸೂರಿಗೆ ಬಂದಿದ್ದು, ಇದಕ್ಕೂ ಮುನ್ನ 2016ರಲ್ಲಿ ನಗರದಲ್ಲಿ ನಡೆದ ವಿಜ್ಞಾನ ಕಾಂಗ್ರೆಸ್ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!