By : Oneindia Kannada Video Team
Published : November 20, 2017, 02:41

ಸಂಸದ ನಳಿನ್ ಕುಮಾರ್ ಅವರನ್ನು ಆಶೀರ್ವದಿಸಿದ ಜನಾರ್ಧನ್ ಪೂಜಾರಿ

ದಕ್ಷಿಣ ಕನ್ನಡ ಜಿಲ್ಲಾ ಬಿಲ್ಲವ ಸಂಘದಿಂದ ಶ್ರೀ ಕ್ಷೇತ್ರ ಪೊಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೆ ಕೊಡಿ ಮರ ಸಲ್ಲಿಸುವ ಕಾರ್ಯಕ್ರಮ ಇಂದು ನಡೆಯಿತು. ಈ ಸಂದರ್ಭದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವ ಬಿ.ಜನಾರ್ಧನ ಪೂಜಾರಿ ಉಪಸ್ಥಿತರಿದ್ದರು. ಕಾರ್ಯಕ್ರಮ ದಲ್ಲಿ ಭಾಗವಹಿಸಿದ್ದ ಸಂಸದ ನಳಿನ್ ಕುಮಾರ್ ಕಟೀಲ್ ಪೂಜಾರಿ ಅವರ ಬಳಿ ತೆರಳಿ ಅವರ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ತಲೆ ಸವರಿದ ಜನಾರ್ಧನ್ ಪೂಜಾರಿ ಆಶೀರ್ವಾದ ಮಾಡಿದರು. ಕೆಲ ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಬಂಟ್ವಾಳಕ್ಕೆ ಆಗಮಿಸಿದ್ದರು. ಕಾಂಗ್ರೆಸ್‌ ಹಿರಿಯ ಮುಖಂಡ ಬಿ. ಜನಾರ್ಧನ ಪೂಜಾರಿ ಅನಾರೋಗ್ಯದಿಂದ ಬಳಲುತ್ತಿರುವ ಮಾಹಿತಿ ಇದ್ದರೂ ಸಿ.ಎಂ, ಸಮೀಪದಲ್ಲೇ ಇದ್ದ ಪೂಜಾರಿ ಅವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿರಲಿಲ್ಲ....

ಸಂಸದ ನಳಿನ್ ಕುಮಾರ್ ಅವರನ್ನು ಆಶೀರ್ವದಿಸಿದ ಜನಾರ್ಧನ್ ಪೂಜಾರಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!