By : Oneindia Kannada Video Team
Published : March 05, 2018, 11:47

ಮೋದಿ ಸರ್ಕಾರವನ್ನ ಮಟ್ಟ ಹಾಕಲು ಜೆಡಿಎಸ್ ನಿಂದ ಮಾತ್ರ ಸಾಧ್ಯ, ಎಂದ ಎಚ್ ಡಿ ಕೆ

ನರೇಂದ್ರ ಮೋದಿ ಅವರ ಓಟ ನಿಲ್ಲಬೇಕಾದರೆ ಕರ್ನಾಟಕದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಬೇಕಾಗಿದೆ. ಮೋದಿಯವರ ಬಣ್ಣದ ಮಾತಿಗೆ ಮರುಳಾಗಬೇಡಿ, ಮೋದಿ ಧೂಳೀಪಟ ಜೆಡಿಎಸ್ ನಿಂದ ಮಾತ್ರ ಸಾಧ್ಯ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಜಿಲ್ಲೆಯ ಮುಳಬಾಗಿಲುನಲ್ಲಿ ಭಾನುವಾರ (ಮಾ 4) ವಿಕಾಸಪರ್ವ ಸಮಾವೇಶದಲ್ಲಿ ಮಾತನಾಡುತ್ತಿದ್ದ ಕುಮಾರಸ್ವಾಮಿ, ಈ ಚುನಾವಣೆಯಲ್ಲಿ ಕುಮಾರಸ್ವಾಮಿ ಮಾತ್ರ ಪರಿಹಾರ ಎನ್ನುವ ಭಾವನೆ ಜನರಲ್ಲಿ ಬಂದಿದೆ. ರಾಜ್ಯದ ಬಡವರನ್ನು ಒಂದು ಸಲ ಸಾಲದಿಂದ ಋಣಮುಕ್ತ ಮಾಡುವ ಅವಕಾಶ ಜೆಡಿಎಸ್ ಗೆ ಕೊಡಲು ಜನತೆಯಲ್ಲಿ ಮನವಿ ಮಾಡಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!